

ಬೇಲೂರು: ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯ ಮಲ್ಲಿಕಾರ್ಜುನಪುರದ ಸಮೀಪ ಬುಧವಾರ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಹಾಸನದಿಂದ ಬೇಲೂರು ಕಡೆಗೆ ಬರುತ್ತಿದ್ದ ಇಂಡಿಕಾ ಕಾರು ಹಾಗೂ ಮೂಡಿಗೆರೆಯಿಂದ ಬೇಲೂರು ಮೂಲಕ ಹಾಸನಕ್ಕೆ ತೆರಳುತ್ತಿದ್ದ ಪಾರ್ಚುನರ್‌ಾರಿನ ನಡುವೆ ಡಿಕ್ಕಿಯಾಗಿದ್ದು, ಇಂಡಿಕಾ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ. ಪಾರ್ಚುನರ್ ಕಾರು ಡಿಕ್ಕಿಯ ರಭಸಕ್ಕೆ ರಸ್ತೆ ಪಕ್ಕದ ಜಮೀನಿಗೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.