

ಚಿತ್ರದುರ್ಗ: ಇಲ್ಲಿನ ಲೋಕಸಭಾ ಕ್ಷೇತ್ರ ಸಂಬಂಧ ಇಬ್ಬರು ಅಭ್ಯರ್ಥಿಗಳು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಮಂಗಳವಾರ ನಾಮಪತ್ರ ಸಲ್ಲಿಸಿದರು.
ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ಅಶೋಕ ಚಕ್ರವರ್ತಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಬಿ.ವೆಂಕಟೇಶ್ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಕ್ಷೇತ್ರಕ್ಕೆ ಈವರೆಗೂ ಒಟ್ಟು 5 ಅಭ್ಯರ್ಥಿಗಳಿಂದ 8 ನಾಮಪತ್ರ ಸಲ್ಲಿಕೆಯಾಗಿದೆ. ಏ. 4ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.