ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್‌ಗೆ ಜಯ

Published on

ಸೋಮವಾರಪೇಟೆ: ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರದಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಬಿ. ಗಣೇಶ್ ಆಶಯ ವ್ಯಕ್ತಪಡಿಸಿದರು.


ಈ ಹಿಂದೆ 20 ತಿಂಗಳ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡಿದ್ದಾರೆ. 2018ರಲ್ಲಿ ಪ್ರಕೃತಿ ವಿಕೋಪ ಸಂಭವಿಸಿದ ಹಿನ್ನೆಲೆಯಲ್ಲಿ ಮನೆ ಆಸ್ತಿ ಕಳೆದುಕೊಂಡ ಸಂತ್ರಸ್ತರಿಗೆ 1000 ಮನೆಗಳನ್ನು ನಿರ್ಮಿಸಿಕೊಟ್ಟು, ಕೊಡಗಿನ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.


ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀಶಕ್ತಿ, ಸ್ವಸಹಾಯ ಸಂಘದ ಸದಸ್ಯರ ಸಾಲ ಮನ್ನಾ, ಆಟೋ ಚಾಲಕರಿಗೆ 2 ಸಾವಿರ ರೂ.ಗಳ ಮಾಸಾಶನ, ವೃದ್ಧಾಪ್ಯ ಹಾಗೂ ಅಂಗವಿಕಲರಿಗೆ 5 ಸಾವಿರ ರೂ.ಗಳ ಮಾಸಾಶನ, ಬಡ ಕುಟುಂಬಕ್ಕೆ ವಾರ್ಷಿಕ ಉಚಿತ 5 ಗ್ಯಾಸ್ ಸಿಲಿಂಡರ್‌ಗಳನ್ನು ವಿತರಿಸುವ ಭರವಸೆಯನ್ನು ಜೆಡಿಎಸ್ ನೀಡಿದೆ. ನುಡಿದಂತೆ ನಡೆಯುವ ಏಕೈಕ ಪಕ್ಷ ಜೆಡಿಎಸ್ ಎಂದು ಹೇಳಿದರು. ವಿರಾಜಪೇಟೆ ಕ್ಷೇತ್ರಕ್ಕೆ ಅಲ್ಪಸಂಖ್ಯಾತರಿಗೆ ಟಿಕೇಟ್ ನೀಡಿದ ಕೀರ್ತಿ ಜೆಡಿಎಸ್‌ಗೆ ಸಲ್ಲುತ್ತದೆ ಎಂದರು.
ಪ್ರಾದೇಶಿಕ ಪಕ್ಷದ ಆಡಳಿತದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ರಾಷ್ಟ್ರೀಯ ಪಕ್ಷಗಳಿಗೆ ಮತ ಹಾಕಿದರೆ, ಅವರ ಹೈಕಮಾಂಡ್ ನಾಗಪುರ ಮತ್ತು ದೆಹಲಿಯಲ್ಲಿರುತ್ತದೆ. ಅಭಿವೃದ್ಧಿಗೆ ಅನುದಾನಕ್ಕೆ ಅಲ್ಲಿಂದ ಆದೇಶ ಬರಬೇಕು. ಆದರೆ ಜೆಡಿಎಸ್ ಹೈಕಮಾಂಡ್ ಹೊಳೆನರಸೀಪುರದಲ್ಲಿ ಇದೆ ಎಂದು ಪಕ್ಷದ ಅಭ್ಯರ್ಥಿ ನಾಪಂಡ ಮುತ್ತಪ್ಪ ಹೇಳಿದರು.


ಪಕ್ಷದ ತಾಲೂಕು ಅಧ್ಯಕ್ಷ ಸಿ.ಎಸ್. ನಾಗರಾಜು, ರಾಜ್ಯ ಉಪಾಧ್ಯಕ್ಷ ಶರೀಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆದಿಲ್‌ಪಾಷ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net