ಎಲ್‌ಕೆಜಿ, ಯುಕೆಜಿ ಆರಂಭಿಸಲು ಅರ್ನಿಷ್ಟಾವಧಿ ಧರಣಿ

14 YERRISWAMY 03
Published on

ಬಳ್ಳಾರಿ ;ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಆಗ್ರಹಿಸಿ ನಗರದ ಡಿಸಿ ಕಚೇರಿ ಮುಂಭಾಗದಲ್ಲಿ ಎಐಟಿಯುಸಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ಶುಕ್ರವಾರ ಅರ್ನಿಷ್ಟಾವಧಿ ಧರಣಿ ನಡೆಸಿದರು.
ಜಿಲ್ಲಾಧ್ಯಕ್ಷೆ ಎಸ್. ಅರ್ಕಾಣಿ ಮಾತನಾಡಿ, ಅಂಗನವಾಡಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭಿಸಬೇಕು. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನು ಆಯ್ಕೆ ಮಾಡಿಕೊಳ್ಳಬೇಕು. ಮಕ್ಕಳಿಗೆ ಬೇಕಾಗುವ ಸಮವಸ್ತ್ರ, ಶೂ, ಬ್ಯಾಗ್, ಪಠ್ಯಪುಸ್ತಕಗಳನ್ನು ಅಂಗನವಾಡಿಗೆ ಪೂರೈಸಬೇಕು. ಮಕ್ಕಳಿಗೆ ಶಿಕ್ಷಣ ಬೋಧಿಸಲು ಹೆಚ್ಚಿನ ತರಬೇತಿ ನೀಡಬೇಕು. ಎಸ್‌ಡಿಎಂಸಿ ಯೋಜನೆ ರದ್ದುಪಡಿಸಿ ಮತ್ತು ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಗೊಳಿಸಬೇಕು ಎಂದರು. ಇಂದಿನಿಂದ ಅನಿರ್ಧಿಷ್ಟಾವಧಿಗೆ ಅಂಗನವಾಡಿಗಳನ್ನು ಬಂದ್ ಮಾಡಿ, ಮೊಬೈಲ್ಗಳಲ್ಲಿ ಪ್ರೇಷಣ ಟ್ರ್ಯಾಕ್ ಮಾಹಿತಿಗಳನ್ನು ನೀಡದೇ, ಮಾತೃವಂದನಾ, ಭಾಗ್ಯಲಕ್ಷ್ಮಿ, ರೋಗ ನಿರೋಧಕ ಚುಚ್ಚುಮದ್ದು ಕಾರ್ಯಕ್ರಮ ಸೇರಿದಂತೆ ಎಲ್ಲ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಈ ಆದೇಶವನ್ನು ಕೈಬಿಡದಿದ್ದರೆ ಬೆಂಗಳೂರು ಚಲೋ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಪ್ರಮುಖರಾದ ಎಆರ್‌ಎಂ ಇಸ್ಮಾಯಿಲ್, ಎಐಟಿಯುಸಿ ಅಧ್ಯಕ್ಷ ಎಚ್. ಎ. ಆದಿಮೂರ್ತಿ, ಇ. ಮಂಗಮ್ಮ, ಕೆ.ಶಾರದಾ, ಸ್ವರೂಪರಾಣಿ, ರತ್ನಮ್ಮ, ಪಿ.ಕಲಾವತಿ, ಮಂಗಳಗೌರಿ, ಶಿವಗಂಗಮ್ಮ, ಪಿ.ಸತ್ಯಸಾವಿತ್ರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net