ಎಲ್ಲ ಗ್ರಾಮಗಳ ಸ್ವಚ್ಛತೆಯತ್ತ ಗಮನಹರಿಸಿ

ard1
Published on

ಔರಾದ್: ದಿನೇದಿನೆ ಡೆಂಘೆ ಹೆಚ್ಚುತ್ತಿದ್ದರೂ ಎಲ್ಲಿಯೂ ಸ್ವಚ್ಛತೆ ಕಾಣಿಸುತ್ತಿಲ್ಲ. ಎಲ್ಲ ಗ್ರಾಮಗಳಲ್ಲಿ ಚರಂಡಿಗಳು ತುಂಬಿವೆ. ಎ¯್ಲೆಂದರಲ್ಲಿ ನೀರು ನಿಂತುಕೊAಡಿದೆ. ಹೀಗಾದರೆ ಡೆಂಘೆ ನಿಯಂತ್ರಣ ಸಾಧ್ಯವೇ? ಪಟ್ಟಣ ಸೇರಿ ಎಲ್ಲ ಹಳ್ಳಿಗಳಲ್ಲಿ ವಾರದೊಳಗೆ ಸ್ವಚ್ಛತೆಯ ಕೆಲಸವಾಗಬೇಕೆಂದು ಶಾಸಕ ಪ್ರಭು ಚವ್ಹಾಣ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪಟ್ಟಣದ ಆರೋಗ್ಯ ಇಲಾಖೆ ಕಚೇರಿಯಲ್ಲಿ ಗುರುವಾರ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಡೆಂಘೆ ನಿಯಂತ್ರಣಕ್ಕಾಗಿ ಆರೋಗ್ಯ ಜತೆಗೆ ಎಲ್ಲ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. ರೋಗ ಲP್ಷÀಣ ಕಾಣಿಸಿದಲ್ಲಿ ತP್ಷÀಣ ತಪಾಸಣೆಗೆ ಒಳಪಡಿಸಿ ಚಿಕಿತ್ಸೆ ಕೊಡಬೇಕು ಎಂದು ತಾಕೀತು ಮಾಡಿದರು.

ಡೆಂಘೆ ಜ್ವರದ ಲP್ಷÀಣ, ತಪಾಸಣೆ, ಚಿಕಿತ್ಸೆ ಅಗತ್ಯದ ಕುರಿತು ಜನರಲ್ಲಿ ತಿಳಿವಳಿಕೆ ಮೂಡಿಸಿದರೆ ರೋಗ ಬಾರದಂತೆ ತಡೆಯಬಹುದು. ಹಾಗಾಗಿ ಜಾಗೃತಿ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ಕೊಡಬೇಕು. ವಿಶೇಷವಾಗಿ ಗ್ರಾಮೀಣ ಭಾಗದಲ್ಲಿರುವ ವೈದ್ಯರು ಮತ್ತು ಸಿಬ್ಬಂದಿ ಸರಿಯಾಗಿ ಕೆಲಸ ಮಾಡಬೇಕು. ಮನೆ-ಮನೆಗೆ ಭೇಟಿ ನೀಡಿ ತಿಳಿವಳಿಕೆ ಮೂಡಿಸಬೇಕು. ಕೆಲವೆಡೆ ಆಶಾ ಕಾರ್ಯಕರ್ತೆಯರು ಸರಿಯಾಗಿ ಕೆಲಸ ಮಾಡುತ್ತಿಲ್ಲವೆಂಬ ದೂರುಗಳಿದ್ದು, ತಕ್ಷಣ ಸರಿಪಡಿಸಬೇಕು ಎಂದರು.

ಎಲ್ಲ ಸರ್ಕಾರಿ ಆಸ್ಪತ್ರೆಗಳ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದ ಚವ್ಹಾಣ್, ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ವೈದ್ಯರು ಮತ್ತು ಸಿಬ್ಬಂದಿ ಸರಿಯಾಗಿ ವ್ಯವಹರಿಸಬೇಕು. ಔಷಧಕ್ಕಾಗಿ ಹೊರಗಡೆ ಚೀಟಿ ಬರೆಯುವುದು, ಸಣ್ಣ ಸಮಸ್ಯೆಗೂ ಜಿ¯್ಲÁ ಕೇಂದ್ರಕ್ಕೆ ಶಿಫಾರಸು ಮಾಡುವುದನ್ನು ನಿಲ್ಲಿಸಬೇಕು. ರೋಗಿಗಳಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಪಿಡಿಒಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ತಮ್ಮ ವ್ಯಾಪ್ತಿಯ ಗ್ರಾಮಗಳಿಗೆ ನಿಯಮಿತ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸಬೇಕು. ಆರೋಗ್ಯ ಇಲಾಖೆ ಸಂಪರ್ಕದಲ್ಲಿದ್ದು, ಎಲ್ಲ ರೀತಿಯ ಸಹಕಾರ ನೀಡಬೇಕು ಎಂದರು.

ತಾಲೂಕು ವೈದ್ಯಾಧಿಕಾರಿ ಡಾ.ಗಾಯತ್ರಿ ಮಾತನಾಡಿ, ಔರಾದ್(ಬಿ) ಹಾಗೂ ಕಮಲನಗರ ತಾಲೂಕು ಕೇಂದ್ರಗಳಲ್ಲಿ ರೋಗ ಪತ್ತೆಗೆ ವ್ಯವಸ್ಥೆ ಮಾಡಲಾಗಿದೆ. ರೋಗ ಲP್ಷÀಣ ಕಾಣಿಸಿದಲ್ಲಿ ತP್ಷÀಣ ತಪಾಸಣೆ ಮಾಡುವ ಕೆಲಸ ನಡೆದಿದೆ. ಈವರೆಗೆ 22 ಜನರಲ್ಲಿ ಡೆಂಘೆ ಲP್ಷÀಣ ಕಾಣಿಸಿದ್ದು, ಇಬ್ಬರಲ್ಲಿ ದೃಢಪಟ್ಟಿದೆ ಎಂದು ತಿಳಿಸಿದರು.

ತಹಸೀಲ್ದಾರ್‌ರಾದ ಮಲಶೆಟ್ಟಿ ಚಿದ್ರೆ, ಅಮಿತಕುಮಾರ ಕುಲಕರ್ಣಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಾದ ಬೀರೇಂದ್ರಸಿAಗ್ ಠಾಕೂರ್, ಶಿವಕುಮಾರ ಘಾಟೆ, ಪಪಂ ಮುಖ್ಯಾಧಿಕಾರಿ ಸ್ವಾಮಿದಾಸ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸುಭಾಷ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net