ಎಲ್ಲ ಗ್ರಾಮಗಳಿಗೂ ಕುಡಿಯುವ ನೀರು

03 HANUR 2
Published on

ಹನೂರು: 192 ಕೋಟಿ ರೂ. ವೆಚ್ಚದ ಬಹುಗ್ರಾಮ ಕುಡಿಯುವ ನೀರು ಯೋಜನೆ ಡಿ.12ರಂದು ಉದ್ಘಾಟನೆಯಾಗಲಿದ್ದು, ಎಲ್ಲ ಗ್ರಾಮಗಳಿಗೂ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದು ಶಾಸಕ ಆರ್.ನರೇಂದ್ರ ಹೇಳಿದರು.
ಸಮೀಪದ ಬೂದುಬಾಳು ಗ್ರಾಮದಲ್ಲಿ ನಿರ್ಮಿಸಿರುವ ಡಾ.ಬಾಬು ಜಗಜೀವನರಾಮ್ ಸಮುದಾಯ ಭವನವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಗ್ರಾಮಕ್ಕೂ ಹಾಗೂ ನಮ್ಮ ಮನೆತನಕ್ಕೂ ಅವಿನಾಭಾವ ಸಂಬಂಧವಿದೆ. ಹಾಗಾಗಿ ಅಧಿಕಾರಾವಧಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಗ್ರಾಮದಲ್ಲಿ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀ ವೆಂಕಟರಮಣಸ್ವಾಮಿ ದೇಗುಲವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಾರೆ. ಇದರಲ್ಲಿ ಹರಕೆ ಹೊತ್ತ ಭಕ್ತರು ಅನ್ನ ಸಂತರ್ಪಣೆ ನೆರವೇರಿಸುವುದರ ಮೂಲಕ ವಾಸ್ತವ್ಯ ಹೂಡುತ್ತಿದ್ದರು. ಆದರೆ ತಂಗಲು ವ್ಯವಸ್ಥೆ ಇರಲಿಲ್ಲ. ಇದರಿಂದ ಭಕ್ತರು ತೊಂದರೆಪಡುವಂತಾಗಿತ್ತು. ಈ ಬಗ್ಗೆ ಮನಗಂಡು ಡಾರ್ಮೆಂಟರಿ ನಿರ್ಮಿಸುವಂತೆ ಹಿಂದಿನ ಕಾಂಗ್ರೆಸ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 1 ಕೋಟಿ ರೂ.ವೆಚ್ಚದಲ್ಲಿ ಡಾರ್ಮೆಂಟರಿ ನಿರ್ಮಿಸಲಾಗಿದೆ ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಮ್ಮ, ಉಪಾಧ್ಯಕ್ಷೆ ರಾಜಮ್ಮ, ರಾಜ್ಯ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಚೇತನ್ ದೊರೆರಾಜು, ಹನೂರು ಅಧ್ಯಕ್ಷ ಮಾದೇಶ್, ಮುಖಂಡರಾದ ಮಂಗಲ ಪುಟ್ಟರಾಜು, ರಂಗಯ್ಯ, ಮಹದೇವ, ರಾಜೇಶ್, ಮರಿಸ್ವಾಮಿ, ಪುಟ್ಟೇಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net