ಎಲ್ಲ ಗ್ರಾಮಗಳಿಗೂ ಸಂಪರ್ಕ ರಸ್ತೆ ನಿರ್ಮಾಣ

CTD MLA CHANDRAPPA----------
Published on

ಚಿತ್ರದುರ್ಗ : ಹೊಳಲ್ಕೆರೆ ತಾಲೂಕಿನಾದ್ಯಂತ ಎಲ್ಲ ಗ್ರಾಮಗಳಿಗೂ ಸಂಪರ್ಕ ಕಲ್ಪಿಸಲು ಗುಣಮಟ್ಟದ ಕಾಂಕ್ರಿಟ್ ರಸ್ತೆಗಳ ನಿರ್ಮಾಣ ನಿರಂತರವಾಗಿ ನಡೆಯುತ್ತದೆ ಎಂದು ಶಾಸಕ ಡಾ.ಎಂ. ಚಂದ್ರಪ್ಪ ಹೇಳಿದರು.

ಚಿತ್ರದುರ್ಗ ತಾಲೂಕು ಸಿರಿಗೆರೆ ಹೋಬಳಿ ಸೀಗೆಹಳ್ಳಿಯಲ್ಲಿ 1.75 ಕೋಟಿ ರೂ. ವೆಚ್ಚದ ಡಾಂಬರ್ ರಸ್ತೆ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಅಳಗವಾಡಿ, ಹಳವುದರ, ಹಳೆರಂಗಾಪುರಕ್ಕೆ ಹೋಗುವ ರಸ್ತೆ ಅಭಿವೃದ್ಧಿಯಾಗಿದೆ. ಗುಣಮಟ್ಟದ ಶಾಲಾ ಕಟ್ಟಡ ಕಟ್ಟಿಸಿದ್ದೇನೆ. ಇದರಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗಿದೆ ಎಂದರು.

ದೇವಾಲಯಕ್ಕೆ ಅನುದಾನ ಕೊಟ್ಟಿದ್ದೇನೆ. ಸಿಸಿ ರಸ್ತೆ, ಹೈಟೆಕ್ ಆಸ್ಪತ್ರೆ, ಕೆರೆ ಕಟ್ಟೆಗಳ ನಿರ್ಮಾಣ, ವಿದ್ಯುತ್ ಪವರ್ ಸ್ಟೇಷನ್‌ಗೆ 250 ಕೋಟಿ ರೂ. ಮಂಜೂರಾಗಿದೆ. ಮೊದಲ ಹಂತವಾಗಿ 110 ಕೋಟಿ ರೂ. ಬಿಡುಗಡೆಯಾಗಿದೆ. ತಾಲೂಕಿನಲ್ಲಿ ಹೈಟೆಕ್ ಆಸ್ಪತ್ರೆ ಕಟ್ಟಿಸಿದ್ದೇನೆ. ವೈದ್ಯರಿಗೆ ವಸತಿ ಗೃಹಗಳನ್ನು ನಿರ್ಮಿಸಲಾಗಿದೆ. ಇನ್ನು ಮೂರುವರೆ ವರ್ಷಗಳಲ್ಲಿ ತಾಲೂಕಿನಾದ್ಯಂತ ಎಲ್ಲ ಅಭಿವೃದ್ಧಿ ಕೆಲಸಗಳು ಪೂರ್ಣಗೊಳ್ಳುತ್ತವೆ ಎಂದು ಭರವಸೆ ನೀಡಿದರು.

ಭರಮಸಾಗರ ಬಿಜೆಪಿ ಮಂಡಲ ಅಧ್ಯಕ್ಷ ಶೈಲೇಶ್, ಗ್ರಾಪಂ ಅಧ್ಯಕ್ಷೆ ರೂಪಾ ಪ್ರದೀಪ್, ಸದಸ್ಯರಾದ ಮೋಹನ್, ಬಸವರಾಜ್, ಪಾಲಾಕ್ಷಪ್ಪ, ಜಯಣ್ಣ, ಮಂಜಣ್ಣ, ಹಿರೇಬೆನ್ನೂರು ನಾಗರಾಜ್, ಗ್ರಾಮದ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net