

ತುಮಕೂರು : ಕರೊನಾ ನಿಯಂತ್ರಣಕ್ಕೆ 18ರಿಂದ 44ವರ್ಷದೊಳಗಿನ ಮುಂಚೂಣಿ ಕಾರ್ಯಕರ್ತರಿಗೆ ಕರೊನಾ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಭರವಸೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮುಂಚೂಣಿ ವಲಯದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ ನಿಗದಿಪಡಿಸಿದ ದಿನಾಂಕಗಳಂದು ಆಯಾ ಇಲಾಖೆ ಮುಖ್ಯಸ್ಥರು ತಮ್ಮ ವ್ಯಾಪ್ತಿಯ ಕಾರ್ಯಕರ್ತರನ್ನು ಗುರುತಿಸಿ ಲಸಿಕೆ ಹಾಕಿಸಬೇಕು ಎಂದು ಸೂಚಿಸಿದರು.
ಕರೊನಾ ಮುಂಚೂಣಿ ಕಾರ್ಯಕರ್ತರೆಂದು ಗುರುತಿಸಲಾದ ಅಂಗವೈಕಲ್ಯ ಹೊಂದಿರುವ (ವಾನಸಿಕ ಅಸ್ವಸ್ಥತೆ ಸೇರಿದಂತೆ) ಫಲಾನುಭವಿಗಳು ಮತ್ತು ಒಬ್ಬ ಆರೈಕೆದಾರರು, ಬಂಧಿಗಳು, ಚಿತಾಗಾರ/ಸ್ಮಶಾನ/ರುದ್ರಭೂಮಿಯಲ್ಲಿ ಕೆಲಸ ವಾಡುವ ಸಿಬ್ಬಂದಿ ಹಾಗೂ ಸ್ವಸಹಾಯಕರಿಗೆ ಮೇ 22ರಿಂದ 25ರವರೆಗೆ ಲಸಿಕೆ ಹಾಕುವ ಕಾರ್ಯ ಪೂರ್ಣಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಆರೋಗ್ಯ ಕಾರ್ಯಕರ್ತರ ನಿಕಟ ಕುಟುಂಬಸ್ಥರು, ಕರ್ತವ್ಯಕ್ಕೆ ನಿಯೋಜಿಸಲಾದ ಶಿಕ್ಷಕರು, ಸರ್ಕಾರಿ ಸಾರಿಗೆ ಸಿಬ್ಬಂದಿ, ಆಟೋ ಮತ್ತು ಕ್ಯಾಬ್ ಚಾಲಕರು, ವಿದ್ಯುತ್ ಮತ್ತು ನೀರು ಸರಬರಾಜು ವಾಡುವವರು, ಅಂಚೆ ಇಲಾಖೆ ಸಿಬ್ಬಂದಿ, ಬೀದಿಬದಿ ವ್ಯಾಪಾರ ವಾಡುವವರು, ಭದ್ರತೆ ಮತ್ತು ಕಚೇರಿಗಳ ಹೌಸ್ ಕೀಪಿಂಗ್ ಸಿಬ್ಬಂದಿಗೆ ಲಸಿಕೆ ನೀಡಲಾಗುವುದು ಎಂದರು. ನ್ಯಾಯಾಂಗ ಅಧಿಕಾರಿಗಳು, ವೃದ್ಧರು, ತೀವ್ರ ಅನಾರೋಗ್ಯದಿಂದ ಬಳಲುತ್ತಿರುವವರ ಆರೈಕೆದಾರರು, ಮಕ್ಕಳ ಸಂರಕ್ಷಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾಧ್ಯಮದವರು, ಆಸ್ಪತ್ರೆಗಳಿಗೆ ಸರಕು ಸರಬರಾಜು ವಾಡುವ ವ್ಯಕ್ತಿಗಳು, ಆಯಿಲ್ ಇಂಡಸ್ಟ್ರಿ ಮತ್ತು ಗ್ಯಾಸ್ ಸರಬರಾಜು ವಾಡುವವರು (ಪೆಟ್ರೋಲ್ ಬಂಕ್, ಕರ್ಮಚಾರಿ ಒಳಗೊಂಡಂತೆ), ಔಷಧ ಕಂಪನಿ ಸಿಬ್ಬಂದಿ, ಆಸ್ಪತ್ರೆಗಳಿಗೆ ಆಕ್ಸಿಜನ್, ಔಷಧ ಮತ್ತು ವೈದ್ಯಕೀಯ ಉಪಕರಣಗಳನ್ನು ಸರಬರಾಜು ವಾಡುವ ಸಿಬ್ಬಂದಿ ಲಸಿಕೆ ಪಡೆಯಬೇಕು ಎಂದರು.
ಕೃಷಿ ಉತ್ಪನ್ನ ವಾರುಕಟ್ಟೆ ಸಮಿತಿ ಕೆಲಸಗಾರರಿಗೆ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಹಾಗೂ ಆದ್ಯತೆ ಗುಂಪುಗಳಾದ ಕಟ್ಟಡ ಕಾರ್ಮಿಕರು, ಟೆಲಿಕಾಮ್ ಮತ್ತು ಇಂಟರ್‌ನೆಟ್ ಸೇವಾದಾರರು, ವಿವಾನಯಾನ ಸಂಸ್ಥೆಗಳ ಸಿಬ್ಬಂದಿ, ಬ್ಯಾಂಕ್ ಸಿಬ್ಬಂದಿ, ಪೆಟ್ರೋಲ್ ಬಂಕ್ ಕೆಲಸಗಾರರು, ಚಿತ್ರೋದ್ಯಮದ ಉದ್ಯಮಿ, ಕಾರ್ಯಕರ್ತರು, ಸಿಬ್ಬಂದಿ, ವಕೀಲರು, ಹೋಟೆಲ್ ಮತ್ತು ಆತಿಥ್ಯ ಸೇವಾದಾರರು, ಕೆಎಂಎ್ ಮತ್ತಿತರರ ವಲಯದ ಸಿಬ್ಬಂದಿಗೂ ಲಸಿಕೆ ನೀಡಲಾಗುವುದು ಎಂದರು.
ಎಂಪ್ರೆಸ್ ಹೈಸ್ಕೂಲ್‌ನಲ್ಲಿ ಲಸಿಕೆ : ಜಿಲ್ಲಾಸ್ಪತ್ರೆ ನರ್ಸಿಂಗ್ ಕಾಲೇಜಿನಲ್ಲಿ ತೆರೆಯಲಾಗಿದ್ದ ಕರೊನಾ ಲಸಿಕಾ ಕೇಂದ್ರವನ್ನು ನಗರದ ಎಂಪ್ರೆಸ್ ಕಾಲೇಜು ಕೊಠಡಿಗೆ ಸ್ಥಳಾಂತರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ. ಮೇ.24ರಿಂದ ಎಂಪ್ರೆಸ್ ಶಾಲೆ ಆವರಣದಲ್ಲಿ ಲಸಿಕೆಯನ್ನು ಪಡೆಯಲು ಅವಕಾಶವಿದೆ.