ಎಲ್ಲ ರಂಗದಲ್ಲಿಯೂ ಮಹಿಳೆ ಗುರುತು

SDP DHAGRA
Published on

ಸಿದ್ದಾಪುರ: ಜ್ಞಾನವಿಕಾಸ ಕೇಂದ್ರದ ಮೂಲಕ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮಾಹಿತಿ ನೀಡುತ್ತಿರುವುದರಿಂದ ಮಹಿಳೆಯರು ಬದಲಾವಣೆ ಹೊಂದುತ್ತಿದ್ದಾರೆ. ಮಹಿಳೆಯರು ಎಲ್ಲ ರಂಗದಲ್ಲಿಯೂ ಗುರುತಿಸಿಕೊಳ್ಳುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿರಸಿ ಜಿಲ್ಲಾ ನಿರ್ದೇಶಕ ಎ. ಬಾಬು ನಾಯ್ಕ ಹೇಳಿದರು.

ಪಟ್ಟಣದ ಶಂಕರಮಠದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ , ಮಹಿಳಾ ಜ್ಞಾನ ವಿಕಾಸ ಕೇಂದ್ರ ಆಶ್ರಯದಲ್ಲಿ ಭಾನುವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಮತ್ತು ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಸಹಾಯಕ ಪೊಲೀಸ್ ಉಪನಿರೀಕ್ಷಕಿ ಸಂಗೀತಾ ಜಿ. ಕಾನಡೆ ಮಾತನಾಡಿ, ಅಪರಿಚಿತ ವ್ಯಕ್ತಿ, ಮೆಸೇಜುಗಳಿಂದ ದೂರವಿರಿ. ಏನಾದರೂ ಸಮಸ್ಯೆಗಳಾದಲ್ಲಿ ಪೊಲೀಸ್ ಇಲಾಖೆಗೆ ಸಂಪರ್ಕಿಸುವಂತೆ ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಪಂ ಮಾಜಿ ಸದಸ್ಯೆ ಸುಮಂಗಲಾ ವಸಂತ ನಾಯ್ಕ, ಮಹಿಳೆಯನ್ನು ಮುಖ್ಯವಾಹಿನಿಗೆ ತರುವಲ್ಲಿ, ಅವರಲ್ಲಿ ಸಂಘಟನೆ, ಶಿಸ್ತು, ಉಳಿತಾಯ, ವ್ಯವಹಾರ ಜ್ಞಾನ , ಕುಟುಂಬ ನಿರ್ವಹಣೆಯಲ್ಲಿ ಉತ್ತಮ ಸಾಮರಸ್ಯ ಬೆಳೆಸುವಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾತ್ರ ಅಮೋಘವಾಗಿದೆ ಎಂದರು.

ಬಿಳಗಿ ಸೀತಾರಾಮಚಂದ್ರ ಪ್ರೌಢಶಾಲೆಯ ಶಿಕ್ಷಕಿ ವಿನೋದಾ ಪಿ. ಭಟ್ ಸಂಪನ್ಮೂಲವ್ಯಕ್ತಿಯಾಗಿ ಮಾತನಾಡಿದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯೆ ಲಕ್ಷ್ಮಿರಾಜು ಉಪಸ್ಥಿತರಿದ್ದರು. ಸಾಧಕ ಮಹಿಳೆಯರನ್ನು ಸನ್ಮಾನಿಸಲಾಯಿತು.

ತಾಲೂಕು ಯೋಜನಾಧಿಕಾರಿ ಗಿರೀಶ್ ಜಿ.ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಲಲಿತಾ ವರದಿ ವಾಚಿಸಿದರು. ಕೃಷಿ ಮೇಲ್ವಿಚಾರಕ ಮಹಾದೇವ. ಬಿ, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಲಲಿತಾ, ಮೇಲ್ವಿಚಾರಕಿ ನಾಗರತ್ನ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net