ಎಲ್ಲ ಸಮಾಜಕ್ಕೂ ಸಮುದಾಯ ಭವನ ಉಪಯೋಗವಾಗಲಿ

26nrp 5..
Published on

ಎನ್.ಆರ್.ಪುರ: ಹಿಂದುಳಿದ ವರ್ಗಕ್ಕೆ ಸೇರಿದ ಸವಿತಾ ಸಮಾಜದಿಂದ ನಿರ್ಮಿಸುತ್ತಿರುವ ಸಮುದಾಯ ಭವನದ ಉಪಯೋಗ ಪ್ರತಿಯೊಂದು ಸಮಾಜಕ್ಕೂ ಸಿಗಬೇಕು ಎಂದು ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಹೇಳಿದರು.

ಪಟ್ಟಣದ ವಾರ್ಡ್ ನಂ.4ರ ಕೊಟ್ರಪ್ಪ ಬಡಾವಣೆಯಲ್ಲಿ 25 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸವಿತಾ ಸಮಾಜದ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಸವಿತಾ ಸಮಾಜದವರಿಗೆ ನಿವೇಶನ ಇಲ್ಲದಿರುವುದರಿಂದ ಪಟ್ಟಣ ಪಂಚಾಯಿತಿಯ ಸಿಎ ನಿವೇಶನವನ್ನು ನೀಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 25 ಲಕ್ಷ ರೂ.ಅನುದಾನ ಬಿಡುಗಡೆ ಮಾಡಿಸಲಾಗಿದೆ. ಶೀಘ್ರವಾಗಿ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲು ಆಹ್ವಾನಿಸಬೇಕು ಎಂದರು.

ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ಕಾಂಗ್ರೆಸ್ ಸರ್ಕಾರ ಶೋಷಿತ ಹಾಗೂ ಅಹಿಂದ ವರ್ಗದವರನ್ನು ಒಗ್ಗೂಡಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡುತ್ತಿದೆ. ಸವಿತಾ ಸಮಾಜದವರು ಕೇಶ ವಿನ್ಯಾಸ ಮಾಡುವ ವೃತ್ತಿಯನ್ನು ಅವಲಂಭಿಸಿರುವ ಶ್ರಮಜೀವಿಗಳು. ಈ ಸಮಾಜಕ್ಕೆ ಸಮುದಾಯ ಭವನ ನಿರ್ಮಾಣಕ್ಕೆ ಉಚಿತ ನಿವೇಶನ ನೀಡಿ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಇದೇ ರೀತಿ ಭಾವಸಾರ ಕ್ಷತ್ರಿಯ ಸಮಾಜ, ಶಬರೀಶ ಹಿಂದುಳಿದ ವರ್ಗಗಳ ಸೇವಾ ಸಂಘಕ್ಕೂ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

ಸವಿತಾ ಸಮಾಜದ ಅಧ್ಯಕ್ಷ ಕುಮಾರ್, ಪಪಂ ಅಧ್ಯಕ್ಷೆ ಸುರಯ್ಯಬಾನು, ಸದಸ್ಯರಾದ ಆರ್.ಕುಮಾರಸ್ವಾಮಿ, ಜುಬೇದಾ, ಮುಕುಂದ, ಸುಬ್ರಹ್ಮಣ್ಯ, ರಜಿ, ಮಾಜಿ ಸದಸ್ಯ ಸುನಿಲ್ ಕುಮಾರ್, ನಾಗಲಾಪುರ ಗ್ರಾಪಂ ಮಾಜಿ ಸದಸ್ಯ ಕೆ.ಗಂಗಾಧರ್, ಮುಖಂಡ ಕಾಫಿ ಗಿರೀಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net