

ಬೈಲಹೊಂಗಲ: ಮಹಿಳೆಯರು ತಮ್ಮ ಜತೆಗೆ ಮಕ್ಕಳನ್ನು ಆರೋಗ್ಯವಂತಾರನ್ನಾಗಿಸುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ರವಿ ಚವ್ಹಾಣ ಹೇಳಿದರು.
ಪಟ್ಟಣದ ತಾಪಂ ಸಭಾಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂ, ಆರೋಗ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೋಷಣ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಾಣಂತಿ ಹಾಗೂ ಮಕ್ಕಳನ್ನು ಅಪೌಷ್ಟಿಕತೆಯಿಂದ ದೂರ ಮಾಡಲು ಪೋಷಣ್ ಅಭಿಯಾನದಂತಹ ಕಾರ್ಯಕ್ರಮಗಳು ಅಗತ್ಯವಾಗಿವೆ. ಇದು ಮಾಸಾಚರಣೆಗಷ್ಟೇ ಸೀಮಿತವಾಗಬಾರದು. ವರ್ಷಪೂರ್ತಿ ಬಾಣಂತಿ ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರ ಪೂರೆಕೆ ಮಾಡಬೇಕು. ಪೌಷ್ಟಿಕ ಆಹಾರದ ಬಳಕೆ, ಉಪಯೋಗದ ಕುರಿತು ಗ್ರಾಮೀಣ ಜನರಿಗೆ ಅರಿವು ಮೂಡಿಸುವ ಕೆಲಸ ಆಗಬೇಕು ಎಂದರು.
ಉಪವಿಭಾಗಾಧಿಕಾರಿ ಪ್ರಭಾವತಿ ಕೀರಪುರ ಅಧ್ಯತೆ ವಹಿಸಿ ಮಾತನಾಡಿ, ಸಮಾಜ ಸ್ವಸ್ಥವಾಗಿದ್ದರೆ ಮಾತ್ರ ದೇಶ ಸದೃಢವಾಗಲಿದೆ ಈ ನಿಟ್ಟಿನಲ್ಲಿ ಎಲ್ಲರೂ ಜಾಗೃತರಾಗಬೇಕು ಎಂದರು. ತಾಲೂಕು ಅರೋಗ್ಯ ಅಧಿಕಾರಿ ಡಾ.ಎಸ್.ಎಸ್. ಸಿದ್ದನ್ನವರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅರುಣಕುಮಾರ ಎಸ್.ಬಿ., ವಕೀಲರ ಸಂದ ಅಧ್ಯ ಎಂ.ಆರ್. ಮೆಳವಂಕಿ ಮಾತನಾಡಿದರು. ಗರ್ಭಿಣಿಯರಿಗೆ ಸಾಂಕೇತಿಕವಾಗಿ ಸೀಮಂತ ಕಾರ್ಯಕ್ರಮ, ಅಂಗನವಾಡಿ ಚಿಣ್ಣರ ಜನ್ಮದಿನ ಆಚರಣೆ ಮಾಡಲಾಯಿತು. ನ್ಯಾಯಾಧೀಶ ಬಸವರಾಜ ನಾಯಕ, ಸರ್ಕಾರಿ ಅಭಿಯೋಜಕರಾದ ಎಸ್.ಜಿ. ಬಾವಿ, ಸುನೀತಾ ಗೌಡ, ವಕೀಲರ ಸಂದ ಉಪಾಧ್ಯ ಎ.ಎಂ. ಸಿದ್ರಾಮನಿ, ಪ್ರಧಾನ ಕಾರ್ಯದರ್ಶಿ ವಿ.ಜಿ. ಕಟದಾಳ, ಅಂಗನವಾಡಿ ಕಾರ್ಯಕರ್ತೆಯರು, ಅರೋಗ್ಯ ಇಲಾಖೆ ಸಿಬ್ಬಂದಿ ಇತರರಿದ್ದರು.