

ಕೆಂಭಾವಿ: ಇAದಿನ ಒತ್ತಡದ ಜೀವನದಲ್ಲಿ ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಅಗತ್ಯವಾಗಿದೆ ಎಂದು ಆಯುಷ್ ವೈದ್ಯಾಧಿಕಾರಿ ಡಾ.ಎಂ.ಬಿ.ಪಾಟೀಲ್ ಹೇಳಿದರು.
ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಆಯುಷ್ ಇಲಾಖೆಯಿಂದ ಶುಕ್ರವಾರ ಹಮ್ಮಿಕೊಂಡ ರಾಷ್ಟಿçÃಯ ಆಯುವೇದ ದಿನಾಚರಣೆ ನಿಮಿತ್ತ ಆಯುರ್ವೇದ ಸಪ್ತಾಹದಲ್ಲಿ ಮಾತನಾಡಿದ ಅವರು, ಮಹಿಳೆಯರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಆಯುರ್ವೇದದಲ್ಲಿ ಹಲವಾರು ಚಿಕಿತ್ಸೆಗಳಿದ್ದು ಅದರ ಲಾಭ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ವೈದ್ಯಾಧಿಕಾರಿ ಡಾ.ಮೀರಾ ಎಸ್.ಜೋಷಿ ಪ್ರಾಸ್ತಾವಿಕ ಮಾತನಾಡಿ, ಉತ್ತಮವಾದ ಜೀವನ ಶೈಲಿ, ಆಹಾರ ಪದ್ಧತಿ, ಯೋಗ ಮತ್ತು ಮನೆ ಮದ್ದುಗಳಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಹೇಳಿದರು. ಡಾ. ಶಫೀಕ್ ಅಹ್ಮದ್, ಡಾ.ಇಮಾಮುದ್ದೀನ್ ಮುಲ್ಲಾ, ಮುಖ್ಯಶಿಕ್ಷಕ ನಾಗರಾಜ ಸಜ್ಜನ್ ಉಪಸ್ಥಿತರಿದ್ದರು. ಸಿಆರ್‌ಪಿ ಬಂದೇನವಾಜ್ ನಾಲತವಾಡ ಸ್ವಾಗತಿಸಿದರು. ಶರ್ಮುದ್ದೀನ್ ವಂದಿಸಿದರು.