

ಯಾದಗಿರಿ: ನಾಡಿನ ಪ್ರತಿಯೊಬ್ಬರೂ ಕೈಜೋಡಿಸಿದಾಗ ಮಾತ್ರ ರಾಜ್ಯ ಮತ್ತು ರಾಷ್ಟçದ ಪ್ರಗತಿ ಕಾಣಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.
ಜಿ¯್ಲÁಡಳಿತ ಭವನದಲ್ಲಿ ಭಾನುವಾರ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನ ನಿಮಿತ್ತ ಯರಗೋಳದಿಂದ ಗೂಗಲï ಬ್ರಿಡ್ಜ್ ಗಡಿವರೆಗೆ ಹಮ್ಮಿಕೊಂಡ ಮಾನವ ಸರಪಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಸಂರP್ಷÀಣೆಗಾಗಿ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನದಂದು ಸಂವಿಧಾನ ಬಗ್ಗೆ ಮಾನವ ಸರಪಳಿ ನಿರ್ಮಿಸುವ ಉz್ದೆÃಶ ನಾವೆಲ್ಲರೂ ಒಂದೇ ಎನ್ನುವುದು. ನಮ್ಮಲ್ಲಿ ಯಾವುದೇ ಬಿನ್ನಾಭಿಪ್ರಾಯ ಇಲ್ಲ ಎಂಬುದಾಗಿದೆ. ಹೀಗಾಗಿ ನಾಡಿನ ಪ್ರಗತಿಗಾಗಿ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಹೇಳಿದರು.
ಭಾರತ ದೇಶದಲ್ಲಿ ವಿವಿಧ ಜಾತಿ, ಧರ್ಮ, ಜನಾಂಗ, ಭಾಷೆ, ಆಚಾರ-ವಿಚಾರ ಮತ್ತು ಸಂಸ್ಕೃತಿ ಇತ್ಯಾದಿಗಳ ವೈವಿದ್ಯತೆ ಇದ್ದರೂ, ಇಂದಿಗೂ ಕೂಡ ಭಾರತ ವಿವಿಧತೆಯಲ್ಲಿ ಏಕತೆಯನ್ನು ಪ್ರತಿಪಾದಿಸಿಕೊಂಡು ಬಂದ ಜಗತ್ತಿನ ಏಕೈಕ ದೇಶವಾಗಿದೆ. ಜಾತ್ಯಾತೀತ ತತ್ವಗಳ ಅಡಿಯಲ್ಲಿ ರೂಪಿತವಾದ ಸಂವಿಧಾನದಲ್ಲಿ ಎಲ್ಲರೂ ಸಮಾನರು ಎಂಬ ಭಾವನೆ ನಮ್ಮೆಲ್ಲರಲ್ಲಿ ಅಡಕವಾಗಿದೆ ಎಂದು ತಿಳಿಸಿದರು.
ಇಂದಿನ ದಿನ ವಿಶೇಷ ಹಾಗೂ ಇತಿಹಾಸದ ದಿನವಾಗಿದ್ದು, ರಾಜ್ಯದಲ್ಲಿ ಬೀದರ್ ಜಿ¯್ಲÉಯಿಂದ ಚಾಮರಾಜನಗರದವರೆಗೆ ಸುಮಾರು ೨೫೦೦ ಕಿಮೀ ಮಾನವ ಸರಪಳಿ ಕರ‍್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಮಾತನಾಡಿ, ಪ್ರಜಾಪ್ರಭುತ್ವ ಬಲಪಡಿಸಿ ಅದರ ಮೌಲ್ಯ ಎತ್ತಿ ಹಿಡಿಯುವುದಕ್ಕಾಗಿ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನ ಆಚರಿಸಲಾಗುತ್ತಿದೆ. ಪ್ರಜಾಪ್ರಭುತ್ವ ಸಮಾನತೆ, ಸ್ವಾತಂತ್ರö್ಯ ಮತ್ತು ಭಾಗೃತ್ವ ಸೌಹಾರ್ದತೆಯ ಭದ್ರಬುನಾದಿ ಮೇಲೆ ನಿಂತಿದೆ. ನಾವು ಆಳವಾದ, ಸಹಭಾಗಿತ್ವದ ಪ್ರಜಾಪ್ರಭುತ್ವಕ್ಕೆ ಬದ್ಧರಾಗುವ ಮೂಲಕ ಅದನ್ನು ಗೌರವಿಸೋಣ ಎಂದರು.
ಜಿಲ್ಲಾಧಿಕಾರಿ ಡಾ.ಸುಶೀಲಾ ಭಾರತದ ಸಂವಿಧಾನ ಪೀಠಿಕೆ ಬೋಧಿಸಿದರು. ಶಾಸಕ ರಾಜಾ ವೇಣುಗೋಪಾಲ ನಾಯಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯP್ಷÀ ವಿನಾಯಕ ಪಾಟೀಲ್, ಜಿ¯್ಲÁ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲವೀಶ್ ಒರ್ಡಿಯಾ, ಉಪ ಅರಣ್ಯ ಸಂರP್ಷÀಣಾಧಿಕಾರಿ ಕಾಜೋಲï ಪಾಟೀಲ್, ಜಿ¯್ಲÁ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಹೆಚ್ಚುವರಿ ಜಿ¯್ಲÁಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಇತರರಿದ್ದರು.
ಲಿಂಗೇರಿಯ ಮುರಾರ್ಜಿ ದೇಸಾಯಿ ಶಾಲಾ ಮಕ್ಕಳು ಪ್ರಾರ್ಥನಾ ಗೀತೆ ಹಾಡಿದರು. ಡಾ.ಸಿದ್ದರಾಜ್ ರಡ್ಡಿ ನಿರೂಪಿಸಿದರು.