ಎಲ್ಲರೂ ಗುರುವಿನ ಮಾರ್ಗದಲ್ಲಿ ನಡೆಯಿರಿ

9ckd1
Published on

ಚಿಕ್ಕೋಡಿ: ವಿದ್ಯಾರ್ಥಿಗಳು ಕಾನೂನು ಪದವಿ ಪಡೆದು ವೃತ್ತಿಯಲ್ಲಿ ಪಾಲ್ಗೊಳ್ಳುವಲ್ಲಿ ಗುರುವಿನ ಮಾರ್ಗದರ್ಶನದಂತೆ ನಡೆಯಬೇಕೆಂದು ವಿಜಯಪುರ ನಿವೃತ್ತ ಜಿಲ್ಲಾ ನ್ಯಾಯಾಧೀಶ ಸುಭಾಷ ಹೊಸಕಲ್ಲೆ ಹೇಳಿದರು.

ಪಟ್ಟಣದ ಕೆಎಲ್‌ಇ ಸಂಸ್ಥೆಯ ಕಾನೂನು ಮಹಾವಿದ್ಯಾಲಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಉನ್ನತ ಸ್ಥಾನ ಪಡೆಯಬೇಕು ಎಂದರು.

ಸಂಪಾದನಾ ಚರಮೂರ್ತಿ ಮಠದ ಸಂಪಾದನಾ ಸ್ವಾಮೀಜಿ ಮಾತನಾಡಿ, ಪರಿಶ್ರಮ, ಪ್ರಾಮಾಣಿಕತೆ ಮತ್ತು ಶಿಸ್ತು ಅಳವಡಿಸಿಕೊಂಡು ಸಾಧಕರಾಗಬೇಕು ಎಂದರು. ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಎಂ.ಆರ್.ಸಗರೆ ಮಾತನಾಡಿದರು.

ಸಾಂಸ್ಕೃತಿಕ ಹಾಗೂ ಕ್ರೀಡಾಕೂಟದ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ಶಿವಾನಂದ ಚೊನ್ನದ, ವೈಶಾಲಿ ಬಿಳಗಿ, ಪಿ.ಎಂ.ಕಮತೆ ಇತರರಿದ್ದರು. ಪ್ರಾಚಾರ್ಯ ಡಾ.ಡಿ.ಬಿ.ಸೊಲ್ಲಾಪುರೆ ಸ್ವಾಗತಿಸಿದರು. ದೀಪಾಲಿ ಪಾಟೀಲ, ಶ್ರೇಯಾ ಹುದ್ದಾರ ವಂದಿಸಿದರು. ಪ್ರತೀಕ್ಷಾ ಶೆಟ್ಟಿ ಮತ್ತು ಆಕಾಂಕ್ಷಾ ಬೊರಗಾವೆ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net