ಎಲ್ಲರೂ ಸಂವಿಧಾನ ಗೌರವಿಸಿ

14ckd2
filter: 0; jpegRotation: 0; fileterIntensity: 0.000000; filterMask: 0; module:1facing:0; hw-remosaic: 0; touch: (-1.0, -1.0); modeInfo: ; sceneMode: Hdr; cct_value: 0; AI_Scene: (0, -1); aec_lux: 126.0; hist255: 0.0; hist252~255: 0.0; hist0~15: 0.0;
Published on

ಚಿಕ್ಕೋಡಿ: ಡಾ.ಬಿ.ಆರ್.ಅಂಬೇಡ್ಕರ್ ಬದುಕು ಎಲ್ಲರಿಗೂ ಸೂರ್ತಿದಾಯಕವಾಗಿದೆ ಎಂದು ಮಹಾಂತೇಶ ಕವಟಗಿಮಠ ಸೌಹಾರ್ದ ಸಹಕಾರಿ ಅಧ್ಯಕ್ಷ ಶರತಚಂದ್ರ ಕವಟಗಿಮಠ ಹೇಳಿದರು.

ಪಟ್ಟಣದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಸೋಮವಾರ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಅಂಬೇಡ್ಕರ್ ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆದು ಸಂವಿಧಾನವನ್ನು ಗೌರವಿಸುವ ಕೆಲಸ ಮಾಡಬೇಕು. ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಿ ಎಂದರು.

ಸಿಎಲ್‌ಇ ಶಿಕ್ಷಣ ಸಂಸ್ಥೆಯ ನಿರ್ದೇಶಕ ಮಲ್ಲಿಕಾರ್ಜುನ ಕವಟಗಿಮಠ, ಮಹಾಂತೇಶ ಕವಟಗಿಮಠ ಸೌಹಾರ್ದ ಸಹಕಾರಿಯ ಚಿಕ್ಕೋಡಿ ಶಾಖೆಯ ಅಧ್ಯಕ್ಷ ಚಂದ್ರಶೇಖರ ಅರಭಾಂವಿ, ಪ್ರವೀಣ ಕಾಂಬಳೆ, ಸಂತೋಷ ಜೋಗಳೆ, ನಾಗರಾಜ ಮೇದಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net