

ಗದಗ: ಕರೊನಾ ಸೋಂಕಿನಿಂದ ದೂರವಿರಲು ಪ್ರತಿಯೊಬ್ಬರೂ ಮುಖಕ್ಕೆ ಮಾಸ್ಕ್ ಧರಿಸಬೇಕು. ಎಂತಹ ಧಾವಂತದಲ್ಲೂ ಪರಸ್ಪರ ಅಂತರ ಕಾಯ್ದುಕೊಳ್ಳಬೇಕು. ಉತ್ತಮ ಆಹಾರ ಪದ್ಧತಿ, ನಿತ್ಯ ವ್ಯಾಯಾಮದ ಅಭ್ಯಾಸಗಳನ್ನು ರೂಢಿಸಿಕೊಂಡು ಆರೋಗ್ಯಕರ ಸಮಾಜ ನಿರ್ವಿುಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದರು.
ಜಿಪಂ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರೊನಾ ನಿಯಂತ್ರಣಕ್ಕಾಗಿ ಬೇರೆ ರಾಜ್ಯಗಳಿಂದ ಬಂದ 212 ಜನರನ್ನು 14 ದಿನ ಸರ್ಕಾರಿ ಕ್ವಾರಂಟೈನ್ನಲ್ಲಿರಿಸಿ ನಿಗಾ ವಹಿಸಲಾಗುತ್ತಿದೆ. ಹೊರ ರಾಜ್ಯಗಳಲ್ಲಿ ಸಿಲುಕಿರುವ ಅಥವಾ ಸ್ವಂತ ಸ್ಥಳಕ್ಕೆ ಹೋಗಬಯಸುವ ವಲಸೆ ಕಾರ್ವಿುಕರು, ವಿದ್ಯಾರ್ಥಿಗಳು, ಪ್ರವಾಸಿಗರು ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು. ಕರೊನಾ ರೋಗ ಇನ್ನೂ ಪೂರ್ಣ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಂದಿಲ್ಲ. ಎಲ್ಲರೂ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದರು.
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್್ಸ) ಕರೊನಾ ಪರೀಕ್ಷೆ ಪ್ರಯೋಗಾಲಯದಲ್ಲಿ ಪ್ರತಿದಿನ 40 ಮಾದರಿ (ಸ್ಯಾಂಪಲ್ಸ್) ಪರೀಕ್ಷೆ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಗುರುತಿಸಲಾದ ಹೈ ರಿಸ್ಕ್ ಪ್ರದೇಶಗಳಲ್ಲಿ ಆರೋಗ್ಯ ಇಲಾಖೆ ಸರ್ವೆ ಮಾಡುತ್ತಿದೆ. ಕೇಂದ್ರ, ರಾಜ್ಯ ಸರ್ಕಾರದ ನಿರ್ದೇಶದನಂತೆ ಕಂಟೇನ್ಮೆಂಟ್ ಪ್ರದೇಶ ಹೊರತುಪಡಿಸಿ ಉಳಿದೆಡೆ ಲಾಕ್ಡೌನ್ನಿಂದ ವಿನಾಯಿತಿ ನೀಡಲಾಗಿದೆ. ಪರಸ್ಪರ ಅಂತರ, ಮುಖಕ್ಕೆ ಮಾಸ್ಕ್ ಧರಿಸುವುದು ಕಡ್ಡಾಯ ಮಾಡಲಾಗಿದೆ. ಹೊರರಾಜ್ಯ, ಜಿಲ್ಲೆಗಳಿಂದ ಬಂದವರಿಗೆ ನೇರವಾಗಿ ಕ್ವಾರಂಟೈನ್ ಮಾಡಲಾಗುತ್ತಿದೆ. ಸಾರ್ವಜನಿಕರಿಗೆ ಏನಾದರೂ ತೊಂದರೆ ಉಂಟಾದರೆ ನೇರವಾಗಿ ಸಹಾಯವಾಣಿ ದೂ.ಸಂ. 08372-231779 ಮೂಲಕ ಜಿಲ್ಲಾಡಳಿತದ ಗಮನಕ್ಕೆ ತರಬಹುದು ಎಂದರು.
ಇದೇ ಸಂದರ್ಭದಲ್ಲಿ ಆಯುಷ್ ಇಲಾಖೆ ಹೊರತಂದ ಕೋವಿಡ್-19 ಜಾಗೃತಿ ಕರಪತ್ರವನ್ನು ಸಚಿವ ಸಿ.ಸಿ. ಪಾಟೀಲ ಬಿಡುಗಡೆಗೊಳಿಸಿದರು. ಕರೊನಾ ಸೇನಾನಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಚವನ್ಪ್ರಾಶ್ ಔಷಧವನ್ನು ವಿತರಿಸಲಾಯಿತು.
ಜಿಪಂ ಸಿಇಒ ಡಾ. ಆನಂದ್ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ ಎನ್., ಅಪರ ಜಿಲ್ಲಾಧಿಕಾರಿ ಸತೀಶಕುಮಾರ ಎಂ., ಜಿಲ್ಲಾ ಆಯುಷ್ ಅಧಿಕಾರಿ ಡಾ. ಸುಜಾತಾ ಪಾಟೀಲ ಇದ್ದರು.
10000 ಕ್ವಿಂ. ಬೀಜ, 14,569 ಮೆ.ಟ. ಗೊಬ್ಬರ ದಾಸ್ತಾನು
ಪ್ರಸಕ್ತ ಸಾಲಿನಲ್ಲಿ ಗದಗ ಜಿಲ್ಲೆಯಲ್ಲಿ ವಾರ್ಷಿಕ ವಾಡಿಕೆ ಮಳೆ 656 ಮಿ.ಮೀ. ಆಗಿದ್ದು, ಮೇ 15ರವರೆಗೆ 74 ಮಿ.ಮೀ. ಮಳೆ ಸುರಿದಿದೆ. ಮುಂಗಾರು ಹಂಗಾಮಿನಲ್ಲಿ 2,80,600 ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಗುರಿ ಹೊಂದಲಾಗಿದೆ. 10 ಸಾವಿರ ಕ್ವಿಂಟಾಲ್ ಬಿತ್ತನೆ ಬೀಜಗಳ ಬೇಡಿಕೆ ಇದೆ. ಆ ಪೈಕಿ 10 ಸಾವಿರ ಕ್ವಿಂಟಾಲ್ ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ಬಿತ್ತನೆ ಬೀಜಗಳನ್ನು ವಿತರಿಸಲು 11 ರೈತ ಸಂಪರ್ಕ ಕೇಂದ್ರಗಳು, 6 ಹೆಚ್ಚುವರಿ ಮಾರಾಟ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಮುಂಗಾರು ಹಂಗಾಮಿಗೆ 41,112 ಮೆಟ್ರಿಕ್ ಟನ್ ರಾಸಾಯನಿಕ ಗೊಬ್ಬರಗಳ ಬೇಡಿಕೆ ಇದೆ. ಮೇ ಮಾಸಾಂತ್ಯದವರೆಗೆ 10,910 ಮೆಟ್ರಿಕ್ ಟನ್ ಬೇಡಿಕೆ ಪೈಕಿ 14,569 ಮೆಟ್ರಿಕ್ ಟನ್ ದಾಸ್ತಾನು ಮಾಡಲಾಗಿದೆ ಎಂದು ಸಚಿವ ಸಿ.ಸಿ. ಪಾಟೀಲ ವಿವರಿಸಿದರು.
EndFragment