

ಚಾಮರಾಜನಗರ: ಜಿಲ್ಲೆಯಲ್ಲಿ ಎಳನೀರು ಮಾರುಕಟ್ಟೆ ನಿರ್ಮಾಣವಾಗಬೇಕು ಎಂದು ರೈತ ಸಂಘದ ವಿಭಾಗೀಯ ಕಾಯದರ್ಶಿ ಸಿ.ಸಿದ್ದರಾಜು ಒತ್ತಾಯಿಸಿದ್ದಾರೆ.
ಸಂತೇಮರಹಳ್ಳಿ ಮಾರುಕಟ್ಟೆಯಲ್ಲಿ ವಿಶಾಲವಾದ ಜಾಗವಿದ್ದು, ಎಪಿಎಂಸಿಯಲ್ಲೂ ಸ್ಥಳಾವಕಾಶವಿದೆ. ಸಂತೇಮರಹಳ್ಳಿಯಲ್ಲಿ ಎಳನೀರು ಮಾರುಕಟ್ಟೆ ನಿರ್ಮಾಣ ಮಾಡಬೇಕು ಎಂದು ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಈಗಾಗಲೇ ಕೃಷಿ ಸಚಿವರ ಗಮನವನ್ನು ಸೆಳೆದಿದ್ದಾರೆ.
ತೆಂಗು ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರ ಸಂಘದಿಂದ ಕಾಯಿಗಳನ್ನು ಉತ್ತಮ ಬೆಲೆಯಲ್ಲಿ ಖರೀದಿ ಮಾಡುತ್ತಿರುವುದರಿಂದ ರೈತರಿಗೆ ಸ್ವಲ್ಪ ಪ್ರಮಾಣದಲ್ಲಿ ವರದಾನವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಎಳನೀರು ಮಾರುಕಟ್ಟೆ ನಿರ್ಮಾಣವಾಗಬೇಕು.