ಜಿಲ್ಲೆಯ ಅಭಿವೃದ್ಧಿಗೆ ಉಸ್ತುವಾರಿ ಸಚಿವರ ಪಣ

S.S. Mallikarjun Birthday, Celebration,
Published on

ಹೊನ್ನಾಳಿ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪಣ ತೊಟ್ಟಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದರು.

ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ 57 ನೇ ಜನ್ಮದಿನದ ಅಂಗವಾಗಿ ತಾಲೂಕು ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ನೀಡಿ, ಮಾತನಾಡಿದರು.

ಹೊನ್ನಾಳಿ- ನ್ಯಾಮತಿ ತಾಲೂಕು ಸೇರಿದಂತೆ ಜಿಲ್ಲೆಯಲ್ಲಿ ಹಲವಾರು ಯೋಜನೆಗಳ ಬಗ್ಗೆ ಶಾಸಕರು ಹಾಗೂ ಅಧಿಕಾರಿಗಳಿಂದ ಈಗಾಗಲೇ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಎಲ್ಲ ಯೋಜನೆಗಳ ಬಗ್ಗೆ ಕ್ರಿಯಾಯೋಜನೆ ತಯಾರಿಸಿ ಯೋಜನೆಗಳಿಗೆ ವಿವಿಧ ಇಲಾಖೆಗಳಿಗೆ ಅನುದಾನ ಬಿಡುಗಡೆ ಮಾಡಿಸಲಿದ್ದಾರೆ ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಣ್ಣಕ್ಕಿ ಬಸವನಗೌಡ, ಸಾಸ್ವೆಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ನಾಗಪ್ಪ, ಪುರಸಭೆ ಅಧ್ಯಕ್ಷ ಮೈಲಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷ ಬಸವರಾಜಪ್ಪ, ಪುರಸಭಾ ಸದಸ್ಯರಾದ ರಾಜೇಂದ್ರ, ಕಾಂಗ್ರೆಸ್ ಮುಖಂಡರಾದ ಎಚ್.ಬಿ.ಅಣ್ಣಪ್ಪ, ಎ.ಜಿ.ಪ್ರಕಾಶ್, ಮಧುಗೌಡ, ವಸಂತನಾಯ್ಕ, ವಿಜೇಂದ್ರಪ್ಪ, ಮಾದಪ್ಪ, ರೇವಣಸಿದ್ದಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net