ಎಸ್.ಎಂ.ಕೃಷ್ಣ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

IMG-20241213-WA0075
Published on

ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ನಿಧನಕ್ಕೆ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನಗರದ ಕೊಳದ ಬೀದಿಯಲ್ಲಿರುವ ತಾಲೂಕು ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರು, ನಗರಸಭಾ ಸದಸ್ಯ ಸುದರ್ಶನಗೌಡ ಪುಷ್ಪಾರ್ಚನೆ ಮಾಡಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಕರ್ನಾಟಕ ಕಂಡ ಅಪರೂಪದ ಮುಖ್ಯಮಂತ್ರಿಯಾಗಿದ್ದು, ಬೆಂಗಳೂರು ನಗರವನ್ನು ಸಿಂಗಾಪುರ ಮಾಡುವ ಕನಸಿನೊಂದಿಗೆ ಸಿಲಿಕಾನ್ ಸಿಟಿ ಮಾಡಲು ಶ್ರಮಿಸಿದ್ದರು. ವಿಧಾನಸೌಧ' ಪಕ್ಕದಲ್ಲಿ ವಿಧಾನಸೌಧದ ಪ್ರತಿಕೃತಿಯಂತೆ ವಿಕಾಸಸೌಧ ನಿರ್ಮಿಸಿದರು. ವಿಕಾಸಸೌಧ ನಿರ್ಮಾತ್ಮ ಎನ್ನುವ ಹೆಗ್ಗಳಿಕೆ ಪಡೆದುಕೊಂಡರು. ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಅವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಭಗವಂತ ಅವರ ಆತ್ಮಕ್ಕೆ ಶಾಂತಿ ನೆಲೆಸಲಿ ಅವರ ಕುಟುಂಬ ದು:ಖ ಭರಿಸುವ ಶಕ್ತಿ ನೀಡಲಿ ಎಂದು ಆಶಿಸಿದರು.

ಸಭೆಯಲ್ಲಿ ತಾಲೂಕು ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಕೆ.ಪುಟ್ಟಸ್ವಾಮಿಗೌಡ, ಉಪಾಧ್ಯಕ್ಷ ಚಿನ್ನುಮುತ್ತು, ಪ್ರಧಾನ ಕಾರ್ಯದರ್ಶಿ ಸೋಮಶೇಖರ್, ಸಹ ಕಾರ್ಯದರ್ಶಿ ಸಿ.ಬಿ.ನಾಗೇಂದ್ರ, ನಿರ್ದೇಶಕರಾದ ಮಹೇಶ್‌ಗೌಡ, ಮಣಿ ಮಾಸ್ಟರ್, ಮರಿಸ್ವಾಮಿ, ಪುರುಷೋತ್ತಮ್, ಅರುಣ್‌ ಕುಮಾ‌ರ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net