

ಚಾಮರಾಜನಗರ: ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ನಿಧನಕ್ಕೆ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ. ಭೈರಪ್ಪ ಅವರ ನಿಧನದಿಂದ ಸಾಹಿತ್ಯ ಲೋಕ ಬಡವಾಗಿದೆ. ಸಾಹಿತ್ಯಾಭಿಮಾನಿಗಳು ಮತ್ತು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.