

ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿ, ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು ಹಾಗೂ ಅವರ ಕಠಿಣ ಪರಿಶ್ರಮ ಮತ್ತು ಬದ್ಧತೆಯನ್ನು ವಿಶೇಷವಾಗಿ ಪ್ರಶಂಸಿಸಿದರು. ಜ್ಞಾನರಶ್ಮಿ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದವು ಸಾಧನೆಗೈದ ಹದಿಮೂರು ವಿದ್ಯಾರ್ಥಿಗಳು ನಮಗೆ ಹೆಮ್ಮೆ ತಂದಿದ್ದಾರೆ. ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವ ಶ್ಲಾಘನೀ ಯ. ಅವರ ಮುಂದಿನ ಶೈಕ್ಷಣಿಕ ಪಯಣವು ಯಶಸ್ವಿಯಾಗಲಿ ಎಂದು ಶಾಲೆಯ ಆಡಳಿತಾಧಿಕಾರಿ ಲಿಖಿತ್ ನಂದಕುಮಾರ್ ತಿಳಿಸಿದ್ದಾರೆ.