

ಗದಗ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮಾರ್ಚ / ಎಪ್ರಿಲ್ 2025 ರ ಮಾಹೆಯಲ್ಲಿ ನಡೆಸಿದ ಎಸ್.ಎಸ್.ಎಲ್. ಸಿ ಪರೀಕ್ಷೆ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯವು ಗದಗ ನಗರದ 06 ಮೌಲ್ಯಮಾಪನ ಕೇಂದ್ರಗಳಲ್ಲಿ ಎಪ್ರಿಲ್ 15 ರಿಂದ ಎಪ್ರಿಲ್ 24 ರ ವರಗೆ ನಡೆಯಲಿದೆ. ಸದರಿ ಪರೀಕ್ಷಾ ಮೌಲ್ಯಮಾಪನಗಳು ಸುಗಮವಾಗಿ ಜರುಗುವ ಮತ್ತು ಶಿಸ್ತು , ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮೌಲ್ಯಮಾಪನ ಕಾರ್ಯಗಳಿಗಾಗಿ ನೇಮಿಸಲಾದ ಸಿಬ್ಬಂದಿಯ ಹೊರತಾಗಿ ಬೇರೆ ಯಾವುದೇ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮೌಲ್ಯಮಾಪನ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ಏಪ್ರಿಲ್ 15 ರಿಂದ 24 ರವರೆಗೆ ರ್ಮಲ್ಯಮಾಪನ ಕಾರ್ಯಗಳಿಗಾಗಿ ನೇಮಿಸಲಾದ ಸಿಬ್ಬಂದಿಯನ್ನು ಹೊರತುಪಡಿಸಿ ಬೇರೆ ಯಾವುದೇ ಅನಧಿಕೃತ ವ್ಯಕ್ತಿಗಳ ಅಥವಾ ವ್ಯಕ್ತಿಯ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ ಇವರು ತಿಳಿಸಿರುತ್ತಾರೆ.