

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅಕ್ರಮ:ಓರ್ವ ಶಿಕ್ಷಕ ಅಮಾನತು
ಚಿಕ್ಕೋಡಿ: ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ಕಳೆದ ಮಾ. 21 ರಂದು ನಡೆದ ಕನ್ನಡ ಭಾಷಾ ಪರೀಕ್ಷೆಯ ಕೊಠಡಿಗಳಲ್ಲಿ ಅಕ್ರಮ ಎಸಗಿದ್ದು ಕಂಡುಬಂದಿದ್ದು,ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಮೇಲ್ವಿಚಾರಕರಾಗಿ ಕೊಠಡಿ ಸಂಖ್ಯೆ 10 ರಲ್ಲಿ ಕಾರ್ಯ ನಿರ್ವಹಿಸಿರುವ ಸಂದರ್ಭದಲ್ಲಿ ಪರೀಕ್ಷೆ ಬರೆಯುತ್ತಿರುವ ಮಕ್ಕಳಿಗೆ ಕೆಲವೊಂದು ಉತ್ತರಗಳನ್ನು ಹೇಳಿ ಕೊಟ್ಟಿರುವ ಬಗ್ಗೆ, ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು,ಈ ದೃಶ್ಯಾವಳಿಗಳನ್ನು ಪರಿಶೀಲಿಸಿ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಐಗಳಿ ತೋಟದ ಶಾಲೆಯ ಶಿಕ್ಷಕ ವಿ.ಕೆ.ಪವಾರ ಅವರನ್ನು ಅಮಾನತುಗೊಳಿಸಿ ಚಿಕ್ಕೋಡಿ ಡಿಡಿಪಿಐ ಆರ್.ಎಸ್.ಸೀತಾರಾಮು ಆದೇಶ ಹೊರಡಿಸಿದ್ದಾರೆ.