ಎಸ್‌ಆರ್‌ಎಸ್‌ಗೆ 10ನೇ ವರ್ಷವೂ ದಾಖಲೆ ಫಲಿತಾಂಶ

SRS College 2
Published on

ಚಿತ್ರದುರ್ಗ: ಜಿಲ್ಲೆಯ ಎಸ್‌ಆರ್‌ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಎಸ್‌ಆರ್‌ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಸತತ 10ನೇ ವರ್ಷವೂ ದಾಖಲೆಯ ಫಲಿತಾಂಶ ಪಡೆದಿದೆ.

ಶಾಲೆಯ 25 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 30 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಕಾರ್ಯದರ್ಶಿ ಪಿ.ಸುಜಾತಾ ಲಿಂಗಾರೆಡ್ಡಿ, ಉಪಾಧ್ಯಕ್ಷ ಬಿ.ಎಲ್.ಅಮೋಘ, ಆಡಳಿತಾಧಿಕಾರಿ ಡಾ.ಟಿ.ಎಸ್.ರವಿ, ಶಾಲೆಯ ಆಡಳಿತಾಧಿಕಾರಿ ಡಾ.ಚಿನ್ಮಯ ಸಿ ಸಾಲಿಮಠ, ಮುಖ್ಯಶಿಕ್ಷಕಿ ಕೆ.ಜೆ.ಪದ್ಮಾವತಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net