ಎಸ್‌ಎಸ್‌ಎಲ್ ಸಿ ಪರೀಕ್ಷೆ-2: 188 ವಿದ್ಯಾರ್ಥಿಗಳು ಗೈರು

PUC Exam 2
Published on

ಹಾಸನ: ಎಸ್‌ಎಸ್‌ಎಲ್ ಸಿ ಪರೀಕ್ಷೆ-2 ಶುಕ್ರವಾರದಿಂದ ಆರಂಭವಾಗಿದ್ದು ಯಾವುದೇ ಸಮಸ್ಯೆ ಇಲ್ಲದಂತೆ ಪರೀಕ್ಷೆ ಯಶಸ್ವಿಯಾಗಿ ನಡೆದಿದ್ದು ಮೊದಲ ಪರೀಕ್ಷೆಗೆ 188 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದಂತಹ ವಿದ್ಯಾರ್ಥಿಗಳಿಗೆ ಎರಡನೇ ಬಾರಿಗೆ ಅವಕಾಶ ಮಾಡಿಕೊಡಲಾಗಿದೆ ಇದಕ್ಕೆ ಜಿಲ್ಲೆಯಲ್ಲಿ 1653 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 1465 ವಿದ್ಯಾರ್ಥಿಗಳು ಕನ್ನಡ ಪರೀಕ್ಷೆಗೆ ಹಾಜರಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 12 ಪರೀಕ್ಷೆ ಕೇಂದ್ರಗಳು ನ ತೆರೆಯಲಾಗಿತ್ತು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಜ್ಞೆ ಜಾರಿ ಮಾಡಲಾಗಿತ್ತು. ಪಕ್ಷ ಕೇಂದ್ರಕ್ಕೆ ಡಿಡಿಪಿಐ ಜವರೇಗೌಡ ಮತ್ತು ಇನ್ನಿತರ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net