ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಮಾ.5ರಂದು ಪ್ರತಿಭಾ ಶೋಧ ಪರೀಕ್ಷೆ

Published on

ಮೈಸೂರು: ವಿಜಯರಂಗ ಚಾರಿಟಬಲ್ ಟ್ರಸ್ಟ್‌ನಿಂದ ಚಾಮುಂಡಿ ಬೆಟ್ಟ ಪಾದದ ಬಳಿ ನಿರ್ಮಿಸಿರುವ ಮಾರ್ವೆಲ್ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ಮಾರ್ಚ್ 5ರಂದು ಪ್ರತಿಭಾ ಶೋಧ ಪರೀಕ್ಷೆ ಆಯೋಜಿಸಿರುವುದಾಗಿ ಕಾಲೇಜಿನ ಪ್ರಾಂಶುಪಾಲ ಪೆರಿಯ ನಾಯಗಮ್ ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 10ಕ್ಕೆ ಪರೀಕ್ಷೆ ನಡೆಯಲಿದೆ. ಇಂಗ್ಲಿಷ್, ವಿಜ್ಞಾನ ಮತ್ತು ಗಣಿತ ವಿಷಯಗಳ ಮೇಲೆ 50 ಅಂಕದ ಬಹು ಆಯ್ಕೆ ಪ್ರಶ್ನೆಪತ್ರಿಕೆ ನೀಡಲಾಗುವುದು. ಪರೀಕ್ಷೆ ಬರೆಯಲು ಸುಮಾರು 1.30 ಗಂಟೆ ಅವಧಿ ಅವಕಾಶವಿದ್ದು, ಇದರಲ್ಲಿ ಹೆಚ್ಚು ಅಂಕ ಗಳಿಸಿದವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಥಮ ಬಹುಮಾನ 50 ಸಾವಿರ ರೂ., ದ್ವಿತೀಯ ಬಹುಮಾನ 25 ಸಾವಿರ ರೂ., ತೃತೀಯ ಬಹುಮಾನ 10 ಸಾವಿರ ರೂ., ನಾಲ್ಕನೇ ಬಹುಮಾನ 5 ಸಾವಿರ ರೂ. ಹಾಗೂ 20 ವಿದ್ಯಾರ್ಥಿಗಳಿಗೆ ಸಮಾಧಾನಕರ ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ದೂ. 0821-2950971, 7676581441 ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು.
ಟ್ರಸ್ಟ್ ಅಧ್ಯಕ್ಷ ಸಿದ್ದೇಗೌಡ, ಕಾರ್ಯದರ್ಶಿ ಗಿಣಿಸ್ವಾಮಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net