

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯಾದ್ಯಂತ ಮಾ. 21ರಿಂದ ಏ. 4ರವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಯುಕ್ತ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ಆವರಣವನ್ನು ನಿರ್ಬಂಽತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ 106 ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1.15ರವರೆಗೆ ಹಾಗೂ ಮಧ್ಯಾಹ್ನ 2ರಿಂದ ಸಂಜೆ 5.15ರವರೆಗೆ ಪರೀಕ್ಷೆ ನಡೆಯಲಿವೆ. ಸಿಆರ್‌ಪಿಸಿ ಕಲಂ 144ರ ಅನ್ವಯ ನಿಷೆಧಾಜ್ಞೆ ಜಾರಿ ಮಾಡಲಾಗಿದೆ. ಸುತ್ತಲಿನ ಝರಾಕ್ಸ್ ಅಂಗಡಿಗಳನ್ನು ಮುಚ್ಚಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.