

ಗೋಣಿಕೊಪ್ಪಲು: ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಗಿಸಿ ಮನೆಗೆ ಹಿಂತಿರುಗಲು ಅನುಕೂಲವಾಗುವ ಸದುದ್ದೇಶದಿಂದ ಖಾಸಗಿ ಬಸ್ ಮಾಲೀಕರೊಬ್ಬರು ತಮ್ಮ ಒಡೆತನದ ಬಸ್ ಒದಗಿಸುವ ಮೂಲಕ ಪಾಲಕರು ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಜಯಲಕ್ಷ್ಮೀ ಬಸ್ ಮಾಲೀಕ ಕಾಡೇಮಾಡ ಗೌತಮ್ ಅವರು ತಮ್ಮ ಈ ಕಾರ್ಯದಿಂದ ಜನ ಮೆಚ್ಚುಗೆಗೆ ಪಾತ್ರರಾದವರಾಗಿದ್ದಾರೆ.
ಪೊನ್ನಂಪೇಟೆ ತಾಲೂಕು ತಿತಿಮತಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರವಿದ್ದು, ಇಲ್ಲಿ ಪರೀಕ್ಷೆ ಬರೆದ ನಂತರ ಬಾಳೆಲೆ, ಪೊನ್ನಪ್ಪಸಂತೆ, ಮಾಯಮುಡಿ ಭಾಗದ ವಿದ್ಯಾರ್ಥಿಗಳು ಮನೆಗೆ ಹಿಂತಿರುಗಲು ಬಸ್ ವ್ಯವಸ್ಥೆ ಇರುವುದಿಲ್ಲ. ಇದನ್ನು ಮನಗಂಡ ಜಯಲಕ್ಷ್ಮೀ ಬಸ್ ಮಾಲೀಕರಾದ ಕಾಡೇಮಾಡ ಗೌತಮ್ ಅವರು, ಪರೀಕ್ಷೆ ನಂತರ ವಿದ್ಯಾರ್ಥಿಗಳು ಬೇಗ ಮನೆ ಸೇರಿ ಮುಂದಿನ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪರೀಕ್ಷೆ ಮುಗಿದೊಡನೆ ತಿತಿಮತಿಯಿಂದ ಬಾಳೆಲೆಗೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ.
ಇವರ ಈ ಸೇವೆ ಬಾಳೆಲೆ ಮತ್ತು ಪೊನ್ನಪ್ಪಸಂತೆ ಭಾಗದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ.