

ಬಾಳೆಹೊನ್ನೂರು: ಗ್ರಾಮೀಣ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದಲ್ಲಿ ಅವರು ಸಾಧನೆ ಮಾಡಲು ಪೂರಕವಾಗಲಿದೆ ಎಂದು ದೇವದಾನ ಗ್ರಾಪಂ ಅಧ್ಯಕ್ಷ ಸಂಪತ್ ಹೇಳಿದರು.
ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸಂಗಮೇಶ್ವರಪೇಟೆ ಪ್ರೌಢಶಾಲೆ ವಿದ್ಯಾರ್ಥಿಗಳನ್ನು ದೇವದಾನ ಗ್ರಾಪಂನಿಂದ ಪುರಸ್ಕರಿಸಿ ಮಾತನಾಡಿದರು. ಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಹಾಗೂ ಉತ್ತಮ ಶಿಕ್ಷಣ ದೊರೆತಲ್ಲಿ ಸಾಧನೆ ಮಾಡಿ ಉತ್ತಮ ಪ್ರಜೆಯಾಗಿ ಸಮಾಜಕ್ಕೆ ಸೇವೆ ಸಲ್ಲಿಸಲಿದ್ದಾರೆ. ಈ ನಿಟ್ಟಿನಲ್ಲಿ ದೇವದಾನ ಗ್ರಾಪಂನಿಂದ ಈ ಬಾರಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ತಲಾ 3 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲಾಗಿದೆ ಎಂದರು. ಗ್ರಾಪಂ ಉಪಾಧ್ಯಕ್ಷೆ ಶೀಲಾ ವಿಜಯ್, ಪಿಡಿಒ ಗಂಗಾಧರ್, ಪೊಲೀಸ್ ಸಿಬ್ಬಂದಿ ರೂಬಿನಾ, ಶೌರ್ಯ ವಿಪತ್ತು ಘಟಕದ ಮಾಸ್ಟರ್ ಚಂದ್ರಶೇಖರ್ ರೈ, ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ರಾಧಾ, ಮೇರಿ ಪಲ್ಲವಿ, ಛಾಯಾ, ಅಕ್ಷತಾ ಇತರರಿದ್ದರು.