

ಚಿತ್ರದುರ್ಗ: ನಗರದ ಎಸ್‌ಜೆಎಂ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಸೋಮವಾರ ಎಲೆಕ್ಟ್ರಾನಿಕ್ಸ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದಿಂದ 3ನೇ ವರ್ಷದ ವಿದ್ಯಾರ್ಥಿಗಳು ಸಿದ್ಧಪಡಿಸಿದ ಮಿನಿ ಪ್ರಾಜೆಕ್ಟ್‌ಗಳ ಪ್ರದರ್ಶನ ‘ಟೆಕ್ನೋವಿಷನ್-ಮಿನಿ ಪ್ರಾಜೆಕ್ಟ್ ಎಕ್ಸ್‌ಪೋ’ ಏರ್ಪಡಿಸಲಾಗಿತ್ತು.
ಪ್ರದರ್ಶನ ಉದ್ಘಾಟಿಸಿದ ಡಾ.ಪಿ.ಬಿ. ಭರತ್ ಮಾತನಾಡಿ, ದ್ಯಾರ್ಥಿಗಳಲ್ಲಿರುವ ಕೌಶಲಗಳ ಅನಾವರಣಕ್ಕೆ ಪ್ರಾಜೆಕ್ಟ್ ವರ್ಕ್‌ಗಳನ್ನು ಕೊಡಲಾಗುತ್ತದೆ. ಈ ಪ್ರದರ್ಶನಕ್ಕೆ 23 ಉಪಯುಕ್ತ ಪ್ರಾಜೆಕ್ಟ್‌ಗಳನ್ನು ವಿದ್ಯಾರ್ಥಿಗಳು ಸಿದ್ಧಪಡಿಸಿದ್ದಾರೆ ಎಂದರು.
ರೋಗಿಗಳು, ರೈತರು ಹಾಗೂ ಮಹಿಳೆಯರ ರಕ್ಷಣೆಗೆ ಅನುಕೂಲವಾಗುವಂತಹ ಪ್ರಾಜೆಕ್ಟ್‌ಗಳನ್ನು ಸಿದ್ಧಪಡಿಸಿರುವುದು ಶ್ಲಾಘನೀಯ. ವಿದ್ಯಾರ್ಥಿಗಳ ಆಲೋಚನೆ ಪ್ರಬುದ್ಧತೆಯಿಂದ ಕೂಡಿದೆ. ಇದಕ್ಕೆ ಅನುಗುಣವಾಗಿ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಪ್ರೋತ್ಸಾಹ ನೀಡಿದ್ದಾರೆ ಎಂದು ತಿಳಿಸಿದರು.
ಸರ್ಕಾರಿ ಪಾಲಿಟೆಕ್ನಿಕ್ ಹಿರಿಯ ಉಪನ್ಯಾಸಕ ಪ್ರೊ.ಬಿ.ಎಂ. ಹಾಲಸ್ವಾಮಿ, ಎಲೆಕ್ಟ್ರಾನಿಕ್ಸ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಕೆ.ಬಿ. ಸಿದ್ದೇಶ್, ಕಾರ್ಯಕ್ರಮ ಸಂಚಾಲಕರಾದ ಪ್ರೊ.ಎಸ್. ರಘು, ಪ್ರೊ.ಎಂ.ಕೆ. ಸುದರ್ಶನ್ ಇತರರು ಇದ್ದರು.