ಎಸ್ಟಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಮುಂದಾಗಿ

20rajesh8
Published on

ಚಾಮರಾಜನಗರ: ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ನಾಯಕ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಮುಂದಾಗಬೇಕು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಸಲಹೆ ನೀಡಿದರು.

ನಗರದ ಶ್ರೀಮಹರ್ಷಿ ವಾಲ್ಮೀಕಿ ಭವನದಲ್ಲಿ ಚಾಮರಾಜನಗರ ತಾಲೂಕು ನಾಯಕ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ, ನಾಯಕ ನೌಕರರ ಸ್ನೇಹ ಬಳಗ ಹಾಗೂ ಮಹರ್ಷಿ ಶ್ರೀವಾಲ್ಮೀಕಿ ನೌಕರರ ಸೌಹಾರ್ದ ಸಹಕಾರ ಸಂಘದ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ 12 ನೇ ವರ್ಷದ ವಾರ್ಷಿಕೋತ್ಸವ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ನಾಯಕ ಸಮುದಾಯಕ್ಕೆ ತನ್ನದೇ ಆದ ಇತಿಹಾಸ, ಪರಂಪರೆ ಇದೆ. ಗುರುವನ್ನು ಮೀರಿಸುವ ವಿಧ್ಯೆಯನ್ನು ಕಲಿತ ಸಮಾಜ ಮೂಲ ಪುರುಷ ಏಕಲವ್ಯ ಹಾಗೂ ರಾಮಾಯಣ ರಚಿಸಿದ ಶ್ರೀ ಮಹರ್ಷಿ ವಾಲ್ಮೀಕಿ ಅವರ ತತ್ವಾದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು ಎಂದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು ಮಾತನಾಡಿ,

ನಾಯಕ ಸಮಾಜ ಕೇವಲ ಹೋರಾಟ, ಭಕ್ತಿ ಮಾತ್ರವಲ್ಲ. ಮಾನವಕುಲಕ್ಕೆ ಧರ್ಮಗ್ರಂಥ ಕೊಟ್ಟ ಸಮಾಜವಾಗಿದೆ. ಶ್ರೀಮಹರ್ಷಿ ವಾಲ್ಮೀಕಿ ಅವರು ಬರೆದಿರುವ ರಾಮಾಯಣ ವಿಶ್ವದ್ಯಾಂತ ಮನೆಯ ಮಾತಾಗಿದೆ. ಇಂತಹ ಸಮಾಜದಲ್ಲಿ ಹುಟ್ಟಿರುವ ನಮಗೆ ಹೆಮ್ಮೆ ಪಡುವ ವಿಚಾರವಾಗಿದೆ ಎಂದರು.

ಈ ಸಂದರ್ಭದಲ್ಲಿ 2024-25 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಪಡೆದ ವಿದ್ಯಾರ್ಥಿಗಳು, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರು ಹಾಗೂ ವಯೋನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಾಯಕ ಜನಾಂಗದ ಮುಖಂಡ ಕೆಲ್ಲಂಬಳ್ಳಿ ಸೋಮನಾಯಕ, ಎಂ.ಶಿವಕುಮಾರ್, ವಾಲ್ಮೀಕಿ ಟ್ರಸ್ಟ್ ಅಧ್ಯಕ್ಷ ಮಹದೇವನಾಯಕ, ಶಿಕ್ಷಕ ಕೆಂಪನಪುರ ಸಿದ್ದರಾಜು, ನಿವೃತ್ತ ಪ್ರಾಂಶುಪಾಲ ಬಂಗಾರನಾಯಕ, ಜಿ.ಪಂ.ಮಾಜಿ ಸದಸ್ಯ ಎಸ್.ಸೋಮನಾಯಕ, ರಮೇಶ್, ನಗರಸಭಾ ಮಾಜಿ ಅಧ್ಯಕ್ಷಸುರೇಶ್ ನಾಯಕ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಆರ್.ಸುಂದರ್, ಕಪಿನಿನಾಯಕ, ಚಾ.ಸಿ.ಸೋಮನಾಯಕ, ಪ್ರಾಂಶುಪಾಲ ಡಾ. ಜಯಕುಮಾರ್ ಹಾಗೂ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net