ಎಸ್‌ಪಿ ನೇತೃತ್ವದಲ್ಲಿ ರೂಟ್ ಮಾರ್ಚ್

22 ckm 3
ಚಿಕ್ಕಮಗಳೂರಿನಲ್ಲಿ ಎಸ್‌ಪಿ ವಿಕ್ರಮ ಅಮಟೆ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಗೌರಿ, ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಸೂಕ್ಷö್ಮ ಹಾಗೂ ಅತಿ ಸೂಕ್ಷö್ಮ ಪ್ರದೇಶಗಳಲ್ಲಿ ರೂಟ್ ಮಾರ್ಚ್ ನಡೆಸಿದರು.
Published on

ಚಿಕ್ಕಮಗಳೂರು: ಗೌರಿ, ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಬಂದೋಬಸ್ತ್ ಪ್ರಯುಕ್ತ ಮೆರವಣಿಗೆಗಳು ಸಾಗುವ ಪ್ರಮುಖ ಸ್ಥಳ, ಸೂಕ್ಷö್ಮ, ಅತೀ ಸೂಕ್ಷö್ಮ ಸ್ಥಳಗಳು ಹಾಗೂ ವಿವಿಧ ಪ್ರದೇಶಗಳಲ್ಲಿ ಎಸ್‌ಪಿ ವಿಕ್ರಮ ಅಮಟೆ ನೇತೃತ್ವದಲ್ಲಿ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್ ನಡೆಯಿತು.

ಜಿಲ್ಲೆಯಾದ್ಯಂತ ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಬಂದೋಬಸ್ತ್ ಪ್ರಯುಕ್ತ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯ ಪ್ರಮುಖ ಸೂಕ್ಷö್ಮ, ಅತಿ ಸೂಕ್ಷö್ಮ ಸ್ಥಳ ಮತ್ತು ಪ್ರದೇಶಗಳಲ್ಲಿ ಮೆರವಣಿಗೆಗಳು ಸಾಗುವ ಸ್ಥಳ, ಮಾರ್ಗಗಳಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರು ಪರಿಶೀಲನೆ ನಡೆಸಿದ್ದು ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಭದ್ರತೆ ಹಿತದೃಷ್ಟಿಯಿಂದ ಕಾಲ್ನಡಿಗೆಯಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.

ಎಸ್‌ಪಿ ಡಾ. ವಿಕ್ರಮ್ ಅಮಟೆ ಅವರು ಜಿಲ್ಲೆಯಲ್ಲಿನ ಪೊಲೀಸ್ ಅಧಿಕಾರಿ ಸಿಬ್ಬಂದಿ ಜೊತೆ ಬಂದೋಬಸ್ತ್ ಸಂಬAಧ ತೆಗೆದುಕೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳ ಕುರಿತು ಸಮಾಲೋಚಿಸಿ ಸೂಕ್ತ ಸಲಹೆ, ಸೂಚನೆ ಮತ್ತು ತಿಳಿವಳಿಕೆ ನೀಡಿದರು. ಕೇವಲ ಚಿಕ್ಕಮಗಳೂರು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಪ್ರಮುಖ ಸೂಕ್ಷö್ಮ ಸ್ಥಳಗಳಲ್ಲಿ ರೂಟ್ ಮಾರ್ಚ್ ನಡೆಸಿ ಬಂದೋಬಸ್ತ್ಗೆ ಕ್ರಮ ಕೈಗೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net