ಎಸ್‌ಸಿ, ಎಸ್‌ಟಿ ಅನುದಾನ ಗ್ಯಾರಂಟಿಗೆ ಬಳಕೆ ವಿರೋಧಿಸಿ ಪ್ರತಿಭಟನೆ

4 ckm 5
ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಡಿಎಸ್‌ಎಸ್ ಕಾರ್ಯಕರ್ತರು ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯಡಿ ಮೀಸಲಾದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ದಂಟರಮಕ್ಕಿ ಶ್ರೀನಿವಾಸ್, ಮರ್ಲೆ ಅಣ್ಣಯ್ಯ, ಕೃಷ್ಣಮೂರ್ತಿ, ರಘು, ಸಂತೋಷ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯಡಿ ಮೀಸಲಾದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಡಿಎಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ್, ಪರಿಶಿಷ್ಟರ ಏಳಿಗೆಗಾಗಿ ಮೀಸಲಾದ ಅನುದಾನ ಪರಿಶಿಷ್ಟರ ಅಭಿವೃದ್ಧಿಗೆ ಮಾತ್ರ ವಿನಿಯೋಗಿಸಬೇಕು. ಆದರೆ ರಾಜ್ಯ ಸರ್ಕಾರ ಈ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ಮುಂದಾಗಿದೆ ಎಂದು ಆರೋಪಿಸಿದರು.

ಕರ್ನಾಟಕ ಮಾನವ ಅಭಿವೃದ್ದಿ ವರದಿ-೨೦೧೫ರ ಪ್ರಕಾರ ಇತರ ಸಮುದಾಯಗಳಿಗೆ ಹೋಲಿಸಿದರೆ ದಲಿತರು ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದಾರೆ. ರಾಜ್ಯದ ಸರಾಸರಿ ಅಭಿವೃದ್ಧಿಗಿಂತಲೂ ದಲಿತರು ಕಡಿಮೆ ಅಭಿವೃದ್ಧಿ ಹೊಂದಿರುವುದು ಕಂಡು ಬಂದಿದೆ.ಹೀಗಿರುವಾಗ ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯಡಿಯಲ್ಲಿ ದಲಿತರ ಕಲ್ಯಾಣಕ್ಕಾಗಿ ಮೀಸಲಾದ ಹಣವನ್ನು ಅಸಮಾನತೆಯನ್ನು ಕಡಿಮೆ ಮಾಡುವ ಯೋಜನೆಗಳಿಗೆ ವಿನಿಯೋಗಿಸಬೇಕೇ ಹೊರತು ಎಲ್ಲರ ಅಭಿವೃದ್ಧಿಗೆ ರೂಪಿಸುವ ಯೋಜನೆಗಳಿಗಲ್ಲ ಎಂದರು.

೨೦೨೩-೨೪ನೇ ಸಾಲಿನಲ್ಲಿ ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಾದ ಸುಮಾರು ೨೫ಸಾವಿರ ಕೋಟಿ ರೂ. ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಹಾಗೂ ೧೫ಸಾವಿರ ಕೋಟಿ ರೂ. ಅನುದಾನವನ್ನು ಅನ್ಯ ಉz್ದೆÃಶಕ್ಕೆ ಬಳಸುವ ಮೂಲಕ ಕಾಯ್ದೆಯ ಉz್ದÉÃಶವನ್ನು ಉಲ್ಲಂಘಿಸಲಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಕೂಡ ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಾದ ಅನುದಾನವನ್ನು ಅನ್ಯ ಉz್ದÉÃಶಕ್ಕೆ ಬಳಸಿಕೊಂಡು ಅನ್ಯಾಯ ಮಾಡಿದೆ. ಸದ್ಯ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಕೂಡ ಬಿಜೆಪಿಯ ದಲಿತ ವಿರೋಧಿ ನೀತಿಯನ್ನೇ ಅನುಸರಿಸುತ್ತಿದೆ ಎಂದು ದೂರಿದರು.

ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಮರ್ಲೆ ಅಣ್ಣಯ್ಯ ಮಾತನಾಡಿ, ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟರ ಮೀಸಲು ಅನುದಾನ ಬಳಕೆ ಮಾಡುವ ಸರ್ಕಾರದ ನಿಲುವನ್ನು ದಲಿತ ಸಮುದಾಯದ ಶಾಸಕರೂ ಸೇರಿದಂತೆ ಮಂತ್ರಿಗಳು ಸಮರ್ಥನೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡಿತನ ಪರಮಾವಧಿಯಾಗಿದೆ. ಇಂತಹ ಶಾಸಕರು, ಮಂತ್ರಿಗಳಿAದ ದಲಿತರ ಉದ್ಧಾರ ಸಾಧ್ಯವೇ ಇಲ್ಲ. ಈ ಶಾಸಕರಿಗೆ ದಲಿತರ ಬಗ್ಗೆ ಕಾಳಜಿ ಇದ್ದಲ್ಲಿ ಸರ್ಕಾರದ ನಿಲುವು ಖಂಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಸಂವಿಧಾನ ಸಂರಕ್ಷಣಾ ಸಮಿತಿ ಮುಖಂಡ ಕೃಷ್ಣಮೂರ್ತಿ ಮಾತನಾಡಿ, ರಾಜಕೀಯ ಪಕ್ಷಗಳಿಗೆ ದಲಿತರ ಓಟು ಬೇಕೇ ಹೊರತು ದಲಿತರ ಉದ್ಧಾರವನ್ನು ಯಾವ ರಾಜಕೀಯ ಪಕ್ಷಗಳೂ ಸಹಿಸುವುದಿಲ್ಲ. ಜಾತಿವಾದಿ, ಕೋಮುವಾದಿ ಪಕ್ಷಗಳ ಕೈಗೆ ಅಧಿಕಾರ ನೀಡಿರುವುದರಿಂದ ಇಂತಹ ಪಕ್ಷಗಳ ನಾಯಕರು ಮತಗಳಿಕೆಗಾಗಿ ದಲಿತರ ಪರವಾಗಿ ಮಾತನಾಡುತ್ತ ಅಧಿಕಾರಕ್ಕೆ ಬರುತ್ತಿದ್ದಂತೆ ದಲಿತ ವಿರೋಧಿಗಳಾಗುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಸರ್ಕಾರದಿಂದ ಇಂತಹ ದಲಿತ ವಿರೋಧಿ ನೀತಿಯನ್ನು ದಲಿತರು ನಿರೀಕ್ಷೆ ಮಾಡಿರಲಿಲ್ಲ. ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಾದ ಹಣವನ್ನು ಗ್ಯಾರಂಟಿಗೆ ಬಳಸಲು ಮುಂದಾದಲ್ಲಿ ದಲಿತರ ಏಳಿಗೆ ಸಾಧ್ಯವೇ ಇಲ್ಲ. ಮುಂದಿನ ಚುನಾವಣೆಗಳಲ್ಲಿ ಇಂತಹ ದಲಿತ ವಿರೋಧಿ ಸರ್ಕಾರಗಳಿಗೆ ಸಮುದಾಯದ ಜನತೆ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದರು.

ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ರಘು, ಸಂತೋಷ್, ಹರೀಶ್‌ಮಿತ್ರ, ತರೀಕೆರೆ ಕುಮಾರ್, ಅರುಣ್‌ಕುಮಾರ್, ಪುಟ್ಟಸ್ವಾಮಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net