ಎಸ್ಸಿ, ಎಸ್ಟಿ ಕಾಲನಿಗಳಲ್ಲಿ ಕಾಮಗಾರಿ ಕೈಗೊಳ್ಳಿ

DC Venkatesh
Published on

ಚಿತ್ರದುರ್ಗ: ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಡಿ ಎಸ್ಸಿ, ಎಸ್ಟಿ ಕಾಲನಿಗಳಲ್ಲಿ ಹಾಗೂ ಈ ಸಮುದಾಯ ಇರುವೆಡೆ ಕಾಮಗಾರಿ ಕೈಗೊಂಡು ಪ್ರಗತಿ ಸಾಧಿಸಿ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆ ಸಂಬಂಧ ಪ್ರಸಕ್ತ ಮೇ ಅಂತ್ಯದವರೆಗಿನ ಪ್ರಗತಿಯ ಕುರಿತು ಗುರುವಾರ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಈ ಯೋಜನೆಯಡಿ ಇಲಾಖೆವಾರು ಹಂಚಿಕೆಯಾದ ಅನುದಾನಕ್ಕೆ ಅನುಗುಣವಾಗಿ ಕ್ರಿಯಾಯೋಜನೆ ಸಿದ್ಧಪಡಿಸಿ. ಯಾವ ಉದ್ದೇಶಕ್ಕಾಗಿ ಅನುದಾನ ಬಳಸಬೇಕೋ ಅದನ್ನು ಹೊರತುಪಡಿಸಿ ಇನ್ಯಾವುದಕ್ಕೋ ಬಳಸುವಂತಿಲ್ಲ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಯಾವುದೇ ಕಾರಣಕ್ಕೂ ನಿಯಮ ಮೀರುವಂತಿಲ್ಲ. ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿ ಅನುಸರಿಸಬೇಕು ಎಂದು ಸೂಚನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net