ಎಸ್ಸಿ, ಎಸ್ಟಿ ಸಭೆಯಲ್ಲಿ ಧರಣಿ ಕುಳಿತ ಮುಖಂಡರು

IMG_20250321_114333
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 44;
Published on

ಚಾಮರಾಜನಗರ: ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮರಣ ಹೊಂದಿದ್ದ ಗರ್ಭಿಣಿಯ ಕುಟುಂಬದವರಿಗೆ ಉದ್ಯೋಗ ನೀಡುವಲ್ಲಿ ಆರೋಗ್ಯ ಇಲಾಖೆ ವಿಫಲವಾಗಿದೆ ಎಂದು ತಾಲೂಕು ಎಸ್ಸಿ, ಎಸ್ಟಿ ಸಭೆಯಲ್ಲಿ ಮುಖಂಡರು ಧರಣಿ ನಡೆಸುತ್ತಿದ್ದಾರೆ.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ದಲಿತ ಮುಖಂಡರು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಬಡಾವಣೆಯ ನಿವಾಸಿಯಾಗಿದ್ದ ನೇತ್ರಾವತಿ ಗರ್ಭಿಣಿಯಾಗಿದ್ದ ಸಂದರ್ಭದಲ್ಲಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ ಮರಣ ಹೊಂದಿದ್ದರು. ಈ ಪ್ರಕರಣದಲ್ಲಿ ನೇತ್ರಾವತಿ ಕುಟುಂಬದವರಿಗೆ ಉದ್ಯೋಗ ನೀಡುವಂತೆ ಹಿಂದಿನ ಸಭೆಯನ್ನು ಬಹಿಷ್ಕರಿಸಲಾಗಿತ್ತು. ಪ್ರಸ್ತುತ ನೇತ್ರಾವತಿ ಅವರ ತಮ್ಮನಾದ ಮಣಿಕಂಠ ಎಂಬುವವರಿಗೆ ಹೊರಗುತ್ತಿಗೆ ಆಧಾರದಲ್ಲಿ ಕೊಳ್ಳೇಗಾಲದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕೆಲಸ ಮಾಡುವಂತೆ ಆರೋಗ್ಯ ಇಲಾಖೆ ಆದೇಶ ನೀಡಿತ್ತು. ಆದರೇ ಆತನಿಗೆ ಸ್ಕ್ಯಾವೆಂಜರ್ ಕೆಲಸ ನೀಡಲಾಗಿದೆ ಎಂದು ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖಂಡ ಸಿ.ಕೆ.ಮಂಜುನಾಥ್ ಮಾತನಾಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಿದಂಬರ ಅವರು ವ್ಯಕ್ತಿಯ ಜಾತಿಯನ್ನು ನೋಡಿ ಉದ್ಯೋಗವನ್ನು ನೀಡಿದ್ದಾರೆ ಹೊರತು ಆತನ ಅರ್ಹತೆಯನ್ನು ನೋಡಿ ಉದ್ಯೋಗವನ್ನು ನೀಡಿಲ್ಲ. ಈ ಪ್ರಕರಣದಲ್ಲಿ ಸೂಕ್ತ ಉದ್ಯೋಗ ನೀಡುವವರೆಗೆ ಸಭೆಯಲ್ಲಿ ಧರಣಿ ನಡೆಸಲಾಗುವುದು. ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿ ಬರುವವರೆಗೂ ಧರಣಿ ಮುಂದುವರಿಸಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net