ಎಸ್ಸಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

application
Published on

ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ (ಎಸ್.ಎಸ್.ಪಿ ಪೋರ್ಟಲ್) ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಫೆ.25 ಕಡೆಯದಿನವಾಗಿದೆ.

ಪರಿಶಿಷ್ಟ ಜಾತಿಯ ಎಲ್ಲಾ ಅರ್ಹ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಕಡ್ಡಾಯವಾಗಿ ವಿದ್ಯಾರ್ಥಿವೇತನದ ಬ್ಯಾಂಕ್ ಖಾತೆಗೆ ಹಾಗೂ ಎನ್‌ಪಿಸಿಐ ಗೆ ಆಧಾರ್ ಸೀಡಿಂಗ್ ಮಾಡಿಸಬೇಕು. ಹೆಚ್ಚಿನ ವಿವರಗಳಿಗೆ ಸಮಾಜ ಕಲ್ಯಾಣ ಇಲಾಖೆ ವೆಬ್ ಸೈಟ್ ಅಥವಾ ಚಾಮರಾಜನಗರ ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಯನ್ನು ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net