ಎಸ್ಸಿಪಿ, ಟಿಎಸ್‌ಪಿ ಹಣ ದುರ್ಬಳಕೆಗೆ ದಲಿತ ಸಂಘರ್ಷ ಸಮಿತಿ ಕಿಡಿ

0403klb02
Published on

ಕಲಬುರಗಿ: ರಾಜ್ಯ ಕಾಂಗ್ರೆಸ್ ಸರ್ಕಾರವೂ ದಲಿತರಿಗಾಗಿ ಮೀಸಲಿಟ್ಟಿರುವ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಅನುದಾನವನ್ನು ಅನ್ಯ ಯೋಜನೆಗಳಿಗೆ ಬಳಸಿ, ದಲಿತ ಅಭಿವೃದ್ಧಿಗೆ ಕೊಡಲಿ ಪೆಟ್ಟು ನೀಡಿದ್ದಾರೆ ಎಂದು ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ನಗರದ ಜಗತ್ ವೃತ್ತದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

೨೦೨೩-೨೪ನೇ ಸಾಲಿನಲ್ಲಿ ೨೫ ಸಾವಿರ ಕೋಟಿ ರೂ.ವನ್ನು ಗ್ಯಾರಂಟಿ ಯೋಜನೆಗಳಿಗೆ, ೧೫,೦೦೦ ಕೋಟಿ ರೂ. ಅನ್ಯ ಉz್ದÉÃಶಕ್ಕೆ ಬಳಸಿ, ಕಾಯ್ದೆಯನ್ನು ಉಲ್ಲಂಘಿಸಲಾಗಿದೆ. ಅಸಮಾನತೆಯ ಅಂತರ ಕಡಿಮೆ ಮಾಡುವ ಯೋಜನೆಗಳಲ್ಲಿ ವಿನಿಯೋಗಿಸುವುದೇ ಬೇರೆ ಯೋಜನೆಗೆ ಬಳಸಿದ್ದಕ್ಕೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೆ ಬಿಜೆಪಿ ಸರ್ಕಾರ ಮಾಡಿದ ಕೆಲಸವನ್ನೇ ಕಾಂಗ್ರೆಸ್ ಮಾಡುತ್ತಿದೆ. ಇದನ್ನು ಸರ್ಕಾರ, ಮುಖ್ಯಮಂತ್ರಿ, ಸಮಾಜ ಕಲ್ಯಾಣ ಇಲಾಖೆ ಸಚಿವರು, ಇತರೆ ಮಂತ್ರಿಗಳು ಸಮರ್ಥಿಸಿಕೊಳ್ಳುತ್ತಿರುವುದು ದುರಂತ. ದಲಿತರ ಮತಗಳಿಂದ ಸರ್ಕಾರ ರಚಿಸಿದ ಕಾಂಗ್ರೆಸ್ಸಿಗರು ಇದೀಗ ಅವರ ಹಣವನ್ನು ಲಪಟಾಯಿಸಿ, ಮಹಾದ್ರೋಹ ಎಸಗುತ್ತಿದ್ದಾರೆ ಎಂದು ಕಿಡಿ ಕಾರಿದರು.

ಕೂಡಲೇ ಅನ್ಯ ಉದ್ಧೇಶಕ್ಕೆ ಬಳಸಿರುವ ಎಸ್‌ಸಿಎಸ್‌ಪಿ, ಟಿಎಸ್‌ಪಿ ಮೀಸಲಿಟ್ಟ ಹಣವನ್ನು ವಾಪಸ್ ಪಡೆಯಬೇಕು, ೭ಡಿ ಸೆಕ್ಷನ್ ರದ್ದುಪಡಿಸಿದಂತೆ ೭ಸಿಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಸಂಚಾಲಕ ಮರೆಪ್ಪ ಮೇತ್ರೆ, ರಾಜ್ಯ ಸಂಚಾಲಕ ಮರಿಯಪ್ಪ ಹಳ್ಳಿ, ಶಿವಶರಣಪ್ಪ ಕುರನಳ್ಳಿ, ಜಯಕುಮಾರ ನೂಲಕರ್, ರಮೇಶ ಕವಡೆ, ದಯಕುಮಾರ ಸಾಗರ, ಶಿವಮೂರ್ತಿ ಪಾಮನೂರ, ಮಲ್ಲಿಕಾರ್ಜುನಗೌಡ, ಮಲ್ಲಣ್ಣ ಮಸ್ಕಿ, ಮಲ್ಲಿಕಾರ್ಜುನ ಹಳ್ಳಿ, ನಾಗಪ್ಪ ರಾಯಚೂರಕರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net