ಎಸ್ಸೆಸ್ಸೆಲ್ಸಿ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

DC Venkatesh
Published on

ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮಾ. 25ರಿಂದ ಏ. 6ರವರೆಗೆ ಜಿಲ್ಲೆಯ 78 ಕೇಂದ್ರಗಳಲ್ಲಿ ನಡೆಯಲಿದೆ. ಹೀಗಾಗಿ ಪರೀಕ್ಷಾ ದಿನದಂದು ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.

ನಿಗದಿತ ಕೇಂದ್ರಗಳ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ, ಗಣಕಯಂತ್ರ, ಅಂತರ್ಜಾಲ ಕೇಂದ್ರಗಳನ್ನು ಪರೀಕ್ಷಾ ದಿನದಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಮುಚ್ಚಬೇಕು. ವಿದ್ಯಾರ್ಥಿಗಳು ಮೊಬೈಲ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣ ತರುವಂತಿಲ್ಲ ಎಂದು ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net