ಏ.12ರಂದು ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Published on

ಚಾಮರಾಜನಗರ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ಏ.12ರಂದು ಯುವ ಸಂಕಲ್ಪ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ನಗರದಲ್ಲಿ ಆಯೋಜಿಸಲಾಗಿದೆ.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಳಗ್ಗೆ 11 ಗಂಟೆಗೆ ಶುರುವಾಗಲಿರುವ ಕಾರ್ಯಕ್ರಮವನ್ನು ರೇಷ್ಮೆ, ಪಶುಸಂಗೋಪನೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಉದ್ಘಾಟಿಸುವರು. ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ಅಧ್ಯಕ್ಷತೆ ವಹಿಸುವರು. ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಮಂಜುನಾಥ್ ಪ್ರತಿಜ್ಞಾವಿಧಿ ಬೋಧಿಸುವರು. ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್‌ಸೇಠ್, ಸಂಸದ ಸುನೀಲ್‌ಬೋಸ್, ಎಂಎಸ್‌ಐಎಲ್ ನಿಗಮದ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್‌ಪ್ರಸಾದ್, ದರ್ಶನ್ ಧ್ರುವನಾರಾಯಣ್, ಡಾ.ಡಿ.ತಿಮ್ಮಯ್ಯ, ಮಧು ಜಿ.ಮಾದೇಗೌಡ, ಮಾಜಿ ಶಾಸಕ ಆರ್.ನರೇಂದ್ರ, ಚಾ.ನಗರ ಕೆಪಿಸಿಸಿ ಉಸ್ತುವಾರಿ ವಿ.ಆರ್.ಸುದರ್ಶನ್, ಪ್ರಧಾನ ಕಾರ್ಯದರ್ಶಿಗಳಾದ ಎಸ್.ಸಿ.ಬಸವರಾಜು, ಮಿಲಿಂದ್‌ಧರ್ಮಸೇನಾ, ರಾಜ್ಯ ಉಪಾಧ್ಯಕ್ಷ ನಂಜುಂಡಸ್ವಾಮಿ ಮತ್ತು ಇತರರು ಪಾಲ್ಗೊಳ್ಳುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net