ಏ.23, 24 ರಂದು ಮೀನುಗಾರಿಕೆ ಸಚಿವರ ಜಿಲ್ಲಾ ಪ್ರವಾಸ

Published on

ಚಾಮರಾಜನಗರ: ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಏ.23 ಹಾಗೂ 24 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 23ರಂದು ರಾತ್ರಿ 10.30 ಗಂಟೆಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ವಾಸ್ತವ್ಯ ಹೂಡುವರು. 24 ರಂದು ಮಧ್ಯಾಹ್ನ 12 ಗಂಟೆಗೆ ಮಲೆ ಮಹದೇಶ್ವರ ಬೆಟ್ಟದ ದೀಪದಗಿರಿ ವಡ್ಡುವಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net