ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಏ.24ರಂದು ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಏ.24ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ ಎಂದರು. ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ವೇಳೆ ನೀರಾವರಿ ಇಲಾಖೆಯಿಂದ ಮಾಹಿತಿ ಪಡೆದುಕೊಂಡ ಸಚಿವರು, ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ಮಾತುಕತೆ ನಡೆಸಿ ಜಿಲ್ಲೆಗೆ ನೀರಾವರಿ ಸೌಲಭ್ಯ ಕಲ್ಪಿಸಲು ಕ್ರಮವಹಿಸಲಾಗುವುದು. ಏ.24ರಂದು ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಮುಂದೂಡುತ್ತಲೇ ಇರುವ ದಿನಾಂಕ: ಮಲೆ ಮಹದೇಶ್ವರ ಬೆಟ್ಟದಲ್ಲಿ ಈಗಾಗಲೇ ಸಚಿವ ಸಂಪುಟ ಸಭೆಯನ್ನು ನಿಗದಿ ಮಾಡಿ ಬಳಿಕ ಮುಂದೂಡಲಾಗಿತ್ತು. ಇದೀಗ ಮತ್ತೆ ದಿನಾಂಕ ನಿಗದಿ ಮಾಡಲಾಗಿದೆ.