ಏ. 26ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ

Published on

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಏ.26ರಂದು ನಗರದಲ್ಲಿ ಶ್ರೀಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆ 9 ಗಂಟೆಗೆ ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಚಾಲನೆ ನೀಡಲಾಗುವುದು. 11.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿರುವ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದ ದಿವ್ಯ ಸಾನಿಧ್ಯ ಹಾಗೂ ಆಶೀರ್ವಚನವನ್ನು ಮೈಸೂರು ಅರಮನೆ ಜಪದಕಟ್ಟೆ ಮಠಾಧ್ಯಕ್ಷ ಶ್ರೀ ಡಾ. ಮುಮ್ಮಡಿ ಚಂದ್ರಶೇಖರ ಶಿವಚಾರ್ಯಸ್ವಾಮಿಗಳು ನೆರವೇರಿಸಲಿದ್ದಾರೆ.

ಪಶು ಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಲೋಕಸಭಾ ಸದಸ್ಯ ಸುನೀಲ್ ಬೋಸ್ ಘನ ಉಪಸ್ಥಿತಿಯನ್ನು ವಹಿಸಲಿದಾರೆ.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಚ್.ಎಂ.ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಕಾವೇರಿ ಜಲಾನಯನ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ. ಮರಿಸ್ವಾಮಿ, ನಗರಸಭೆ ಅಧ್ಯಕ್ಷ ಎಸ್. ಸುರೇಶ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ. ಚಂದ್ರು, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್ (ಮುನ್ನಾ) ನಗರಸಭೆ ಉಪಾಧ್ಯಕ್ಷ ಎಚ್.ಎಸ್. ಮಮತ ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net