ಏ.5 ಮತ್ತು 6 ರಂದು ಮಾನವ ಮೈತ್ರಿ ಸಂಪದ ಸಮ್ಮೇಳನ

IMG_20250327_115015
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.5539815, 0.11616667);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 40;
Published on

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಸಾಹಿತ್ಯ ಅಕಾಡೆಮಿ, ಮೈಸೂರಿನ ವಿಶ್ವ ಮೈತ್ರಿ ಬುದ್ಧ ವಿಹಾರ, ನಂಜನಗೂಡಿನ ತಥಾಗತ ಬುದ್ಧ ವಿಹಾರ, ಮೈಸೂರು ವಿಶ್ವವಿದ್ಯಾಲಯ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ಸಹಯೋಗದಲ್ಲಿ ಏ.5 ಮತ್ತು 6 ರಂದು ಮಾನವ ಮೈತ್ರಿ ಸಂಪದ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಹಿರಿಯ ದಲಿತ ಮುಖಂಡ ವೆಂಕಟರಮಣಸ್ವಾಮಿ(ಪಾಪು) ತಿಳಿಸಿದರು.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ, ವಿಜ್ಞಾನ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ ಚಿಂತಕರು, ಹೋರಾಟಗಾರರು, ಬರಹಗಾರರು, ರಂಗಕರ್ಮಿಗಳು, ಗಾಯಕರು, ಜನ ಚಳುವಳಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ನಾಡಿನ ಹಿರಿಯರು, ಯುವಕ-ಯುವತಿಯರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. 2 ದಿನಗಳ ಕಾಲವೂ ಸಂವಾದ, ದುಂಡುಮೇಜಿನ ಸಭೆ, ಪ್ರಶ್ನೋತ್ತರ, ಚರ್ಚೆಗಳನ್ನು ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಮ್ಮೇಳನದಲ್ಲಿ ಬುದ್ಧ ಮತ್ತು ಅಂಬೇಡ್ಕರ್ ಅವರ ಸಾಹಿತ್ಯದ ಮೇಲೆ ಕೆಲಸ ಮಾಡಿದ, ಹಾಡುಗಳನ್ನು ಕಟ್ಟಿದ, ರಂಗಕಲೆ ಪ್ರದರ್ಶಿಸಿದ ಹಾಗೂ ವಿವಿಧ ಸಂಸ್ಥೆಗಳನ್ನು ಕಟ್ಟಿ ಸಾಮಾಜದಲ್ಲಿ ಜಾಗೃತಿ ಮೂಡಿಸುತ್ತಿರುವ ಅನೇಕ ಸಾಧಕರನ್ನು ಒಂದು ವೇದಿಕೆಗೆ ತರಲು ಪ್ರಯತ್ನಿಸಲಾಗಿದೆ. ಹಿರಿಯ ಮತ್ತು ಕಿರಿಯ ತಲೆಮಾರಿನ ಚಿಂತನೆಗಳನ್ನು ಇಲ್ಲಿ ಮುಖಾಮುಖಿಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಮುಖಂಡ ಹರಾ ಕುಮಾರ್ ಮಾತನಾಡಿ, ಅಂಬೇಡ್ಕರ್ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಧಮ್ಮ ಪಯಣ ಎಂಬ ವಿನೂತನ ಕಾರ್ಯಕ್ರಮದಲ್ಲಿ 150 ಗ್ರಾಮಗಳನ್ನು ಭೇಟಿ ಮಾಡಿದ ವಿಶೇಷವಾಗಿ ಈ ಸಮ್ಮೇಳನವನ್ನು ಆಯೋಜಿಸಲಾಗಿದೆ. ಬುದ್ಧ ಮತ್ತು ಅಂಬೇಡ್ಕರ್ ದೃಷ್ಟಿಕೋನದ ಕುರಿತು ಸಾಮಾನ್ಯ ಜನರಲ್ಲಿ ಜಾಗೃತಿ ಮೂಡಿಸುವುದೇ ಈ ಕಾರ್ಯಕ್ರಮವದ ಉದ್ದೇಶವಾಗಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಮುಖಂಡರಾದ ಸೋಮಯ್ಯ ಮಲೆಯೂರು, ಸುಭಾಷ್ ಮಾಡ್ರಳ್ಳಿ, ಸಿ.ಎಂ.ನರಸಿಂಹಮೂರ್ತಿ, ಬಸವಟ್ಟಿಗೆ ಕೃಷ್ಣಮೂರ್ತಿ, ವಾಸು ಹುಲ್ಲಾಪುರ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net