ಏ.7 ರಿಂದ ವಸ್ತು ಪ್ರದರ್ಶನ ಮತ್ತು ಮಾರಾಟ

Published on

ಚಾಮರಾಜನಗರ: ಸಂಜೀವಿನಿ-ಕೆಎಸ್‌ಆರ್‌ಎಲ್‌ಪಿಎಸ್ ಯೋಜನೆಯಡಿ ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರು ಉತ್ಪಾದಿಸಿರುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಏ.7 ರಿಂದ 9 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ಪಚ್ಚಪ್ಪ ವೃತ್ತದ ಬಳಿಯ ಪೇಟೆ ಪ್ರೈಮರಿ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಮೇಳದಲ್ಲಿ ಸ್ವ-ಸಹಾಯ ಸಂಘಗಳು ಉತ್ಪಾದಿಸಿರುವ ವಿವಿಧ ರೀತಿಯ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸ್ವ ಸಹಾಯ ಸಂಘಗಳು ಭಾಗವಹಿಸುತ್ತಿವೆ. ಸಾರ್ವಜನಿಕರು ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಸದುಪಯೋಗಪಡಿಸಿಕೊಳ್ಳುಸವಂತೆ ಚಾಮರಾಜನಗರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net