ಏ.7ರಂದು ಸಚಿವರ ಜಿಲ್ಲಾ ಪ್ರವಾಸ

Published on

ಚಾಮರಾಜನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿಯ ರಾಜ್ಯ ಸಚಿವರಾದ ವಿ. ಸೋಮಣ್ಣ ಏ.7ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 10.30 ಗಂಟೆಗೆ ಹನೂರು ತಾಲೂಕಿನ ರಾಮಾಪುರಕ್ಕೆ ಆಗಮಿಸಿ ಅಲ್ಲಿನ ಶ್ರೀಆಂಜನೇಯಸ್ವಾಮಿ ದೇವಾಲಯದ ಉದ್ಘಾಟನೆ ನೆರವೇರಿಸುವರು. ಮಧ್ಯಾಹ್ನ 12 ಗಂಟೆಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ಮಲೆ ಮಹದೇಶ್ವರ ಸ್ವಾಮಿಯ ದೇವಾಲಯಕ್ಕೆ ಭೇಟಿ ನೀಡುವರು. ಮಧ್ಯಾಹ್ನ 12.30 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net