ಏ.೧೬,೧೭ ರಂದು ಸಿಇಟಿ ಪರೀಕ್ಷೆ

bkt-11-1
Published on

ಬಾಗಲಕೋಟೆ: ಯುಜಿ ಸಿ ಇ ಟಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಏ.೧೬ ಮತ್ತು ೧೭ ರಂದು ಜಿಲ್ಲೆಯ ೨೧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಒಟ್ಟು ೯೩೬೯ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಯಾವುದೇ ತೊಂದರೆಗಳಿಲ್ಲದೇ ಪರೀಕ್ಷೆಗಳನ್ನು ನಡೆಸುವಂತೆ ಜಿಲ್ಲಾಽಕಾರಿ ಜಾನಕಿ ಕೆ.ಎಂ ಸೂಚಿಸಿದರು.

ಜಿಲ್ಲಾಽಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ೨೦೨೫ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಏ.೧೬ ರಂದು ಬೆಳಗ್ಗೆ ೧೦.೩೦ ರಿಂದ ೧೧.೫೦ ರವರೆಗೆ ಭೌತಶಾಸ್ತç ಮಧ್ಯಾಹ್ನ ೨.೩೦ ರಿಂದ ೩.೫೦ ರವರೆಗೆ ರಸಾಯನಶಾಸ್ತç, ಏ.೧೭ ರಂದು ಬೆಳಗ್ಗೆ ೧೦.೩೦ ರಿಂದ ೧೧.೫೦ ರವರೆಗೆ ಗಣಿತಶಾಸ್ತç ಮತ್ತು ಮಧ್ಯಾಹ್ನ ೨.೩೦ ರಿಂದ ೩.೫೦ ರವರೆಗೆ ಜೀವಶಾಸ್ತç ಪರೀಕ್ಷೆಗಳು ಬಾಗಲಕೋಟೆ ನಗರದ ೧೩ ಹಾಗೂ ಜಮಖಂಡಿ ನಗರದ ೦೮ ಪರೀಕ್ಷಾ ಕೇಂದ್ರಗಳಲ್ಲಿ ಸಿ ಸಿ ಕ್ಯಾಮೇರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಸಲಾಗುವುದು ಎಂದರು.

ವೆಬ್ ಕಾಸ್ಟಿಂಗ್ ಕಡ್ಡಾಯವಾಗಿದ್ದು, ಯಾವುದೇ ಲೋಪದೋಷಗಳು ಉಂಟಾಗದAತೆ ಪರೀಕ್ಷೆಗಳು ಸುಗಮವಾಗಿ ನಡೆಯಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತ ೨೦೦ ಮೀಟರವರೆಗೆ ೧೪೪ ಕಲಂ ಜಾರಿ ಮಾಡಲಾಗುವುದು. ಝರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗುವುದಲ್ಲದೇ, ಪೊಲೀಸ್ ಬಂದೋಬಸ್ತನಲ್ಲಿ ಪ್ರಶ್ನೆ ಪತ್ರಿಕೆಗಳ ಸಾಗಾಣಿಕೆ ಇದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಗೋಡೆ ಗಡಿಯಾರಗಳನ್ನು ಅಳವಡಿಸುವುದು ಮತ್ತು ಜಿಲ್ಲೆಯಲ್ಲಿ ಬಿಸಿಲಿನ ಹೆಚ್ಚಳದ ಕಾರಣ ಪರೀಕ್ಷೆ ಕೊಠಡಿಯೊಳಗೆ ಫ್ಯಾನ್, ನೀರು, ಮೂಲಭೂತ ಸೌಕರ್ಯಗಳ ಪೂರೈಕೆ ಮಾಡಿಕೊಡಿ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಡಿಡಿಪಿಯು ಪ್ರಕಾಶ ಜೇವುರ, ಪ್ರಭಾರ ಡಿಡಿಪಿಐ ಎಚ್.ಜಿ.ಮಿರ್ಜಿ ಸೇರಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net