ಏ.೧೭ ರಂದು ಎಚ್.ವೈ.ಮೇಟಿ ನಾಮಪತ್ರ ಸಲ್ಲಿಕೆ

bkt-15-4
ಬಾಗಲಕೋಟೆ ನಗರದ ಪ್ರೇಸ್‌ಕ್ಲಬ್‌ನಲ್ಲಿ ಮಾಜಿ ಸಚಿವ ಎಚ್.ವೈ.ಮೇಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮುಖಂಡರಾದ ಎಸ್.ಎನ್.ರಾಂಪೂರ, ಬಸವರಾಜ ಬಾದಾಮಿ, ನಾಗರಾಜ ಹದ್ಲಿ, ದ್ಯಾಮಣ್ಣ ಗಾಳಿ,ಅಶೋಕ ಲಾಗಲೂಟಿ, ರಾಜು ಮನ್ನಿಕೇರಿ, ರಜಾಕ ಬೆಣ್ಣೂರ ಇದ್ದರು.
Published on

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬೃಹತ್ ಮೆರವಣಿಗೆ ಮೂಲಕ ಏ.೧೭ ರಂದು ನಾಮಪತ್ರ ಸಲ್ಲಿಕೆ ಮಾಡಲಾಗುವುದು ಎಂದು ಮಾಜಿ ಸಚಿವ ಎಚ್.ವೈ.ಮೇಟಿ ಹೇಳಿದರು.

ಅಂದು ಬೆಳಗ್ಗೆ ೧೦.೩೦ ಗಂಟೆಗೆ ವಿದ್ಯಾಗಿರಿ ಕಾಂಗ್ರೆಸ್ ಕಚೇರಿಯಿಂದ ಬೃಹತ್ ಮೆರವಣಿಗೆ ಆರಂಭವಾಗಲಿದೆ. ನಂತರ ಕಾಳಿದಾಸ ವೃತ್ತ, ಜಿಲ್ಲಾ ಆಸ್ಪತ್ರೆ, ನಗರಸಭೆ ವೃತ್ತ, ಎಲ್‌ಐಸಿ ವೃತ್ತ, ಪೊಲೀಸ್ ಪ್ಯಾಲೇಸ್ ಮೂಲಕ ಮೆರವಣಿಗೆ ಸಾಗಿ ತಹಸೀಲ್ದಾರ ಕಚೇರಿ ಆವರಣ ತಲಪಲಿದೆ. ಬಾಗಲಕೋಟೆ ಮತಕ್ಷೇತ್ರದ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಅಪಾರ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಾದ ಎಸ್.ಆರ್.ಪಾಟೀಲ, ಲಕ್ಷ್ಮಣ ಸವದಿ, ಸತೀಶ ಜಾರಕಿಹೊಳಿ ಸೇರಿದಂತೆ ಇತರರು ಆಗಮಿಸಲಿದ್ದಾರೆ. ಜಿಲ್ಲೆಯ ಅನೇಕ ಕಾಂಗ್ರೆಸ್ ನಾಯಕರು ಪಾಲ್ಗೊಳ್ಳಿದ್ದಾರೆ. ಈ ಸಾರಿ ಕಾಂಗ್ರೆಸ್ ಪಕ್ಷಕ್ಕೆ ಜನ ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಡಾ.ದೇವರಾಜ ಪಾಟೀಲ ಅವರೊಂದಿಗೆ ಸಂಪರ್ಕ ಮಾಡಿ ಮಾತನಾಡಿದ್ದೇನೆ. ಸಹಕಾರ ನೀಡಲು ವಿನಂತಿಸಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಅಶೋಕ ಲಾಗಲೂಟಿ ಮಾತನಾಡಿ, ನಾಮಪತ್ರ ಸಲ್ಲಿಕೆ ದಿನ ಅದ್ದೂರಿಯಾಗಿ ಮೆರವಣಿಗೆ ನಡೆಯಲಿದೆ. ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ೨೦ ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ನಡೆದಿದೆ. ಕ್ಷೇತ್ರದ ಮತದಾರರು ಬದಲಾವಣೆ ಬಯಸಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ವೈ.ಮೇಟಿ ಅವರಿಗೆ ಅವಕಾಶ ನೀಡಲಿದ್ದಾರೆ ಎಂದು ಹೇಳಿದರು.
ಮುಖಂಡರಾದ ಎಸ್.ಎನ್.ರಾಂಪೂರ, ಬಸವರಾಜ ಬಾದಾಮಿ, ನಾಗರಾಜ ಹದ್ಲಿ, ದ್ಯಾಮಣ್ಣ ಗಾಳಿ,ಅಶೋಕ ಲಾಗಲೂಟಿ, ರಾಜು ಮನ್ನಿಕೇರಿ, ರಜಾಕ ಬೆಣ್ಣೂರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net