ಏ.೨೬ ರಿಂದ ಕಾಲು ಬಾಯಿ ರೋಗಕ್ಕೆ ಲಸಿಕಾ ಅಭಿಯಾನ

bkt-17-3
ಬಾಗಲಕೋಟೆ ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ೭ನೇ ಸುತ್ತಿನ ಜಾನುವಾರುಗಳ ಕಾಲು ಬಾಯಿ ರೋಗದ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿಯ ಪೂರ್ವಭಾವಿ ಸಿದ್ಧತೆಗಳ ಸಭೆಯಲ್ಲಿ ಜಿಲ್ಲಾಽಕಾರಿ ಜಾನಕಿ ಕೆ.ಎಂ. ಪ್ರಚಾರ ಸಾಮಗ್ರಿ ಬಿಡುಗಡೆಗೊಳಿಸಿದರು
Published on

ಬಾಗಲಕೋಟೆ: ಜಿಲ್ಲೆಯ ಜಾನುವಾರುಗಳಿಗೆ ಏ.೨೬ ರಿಂದ ಜೂನ್ ೪ ವರೆಗೆ ೭ನೇ ಸುತ್ತಿನ ಜಾನುವಾರುಗಳ ಕಾಲ ಬಾಯಿ ರೋಗಕ್ಕೆ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಽಕಾರಿ ಜಾನಕಿ ಕೆ.ಎಂ. ಹೇಳಿದರು.

ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ೭ನೇ ಸುತ್ತಿನ ಜಾನುವಾರುಗಳ ಕಾಲು ಬಾಯಿ ರೋಗದ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿಯ ಪೂರ್ವಭಾವಿ ಸಿದ್ಧತೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಸಿಕಾ ಕಾರ್ಯಕ್ರಮದ ಜೊತೆಗೆ ಜಾನುವಾರುಗಳಿಗೆ ಚರ್ಮಗಂಟು ರೋಗದ ಲಸಿಕೆ ಮತ್ತು ನಾಯಿಗಳಿಗೆ ರೇಬಿಸ್ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಎಸ್.ಎಚ್.ಕರಡಿಗುಡ್ಡ ಮಾತನಾಡಿ, ಲಸಿಕಾ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಷ್ಟಿçÃಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಪ್ರತಿ ೬ ತಿಂಗಳಿಗೊಮ್ಮೆ ಕಾಲು ಬಾಯಿ ರೋಗದ ಲಸಿಕೆ ಹಾಕಿಸಿಕೊಳ್ಳುವುದು ಒಂದು ಉತ್ತಮ ಯೋಜನೆಯಾಗಿದೆ. ಜಾನುವಾರುಗಳಿಗೆ ಈ ರೋಗ ಬಂದ ನಂತರ ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುತ್ತದೆ. ಸದರಿ ಲಸಿಕೆ ಹಾಕಿಸಿ ರೋಗ ನಿಯಂತ್ರಿಸಲು ಮತ್ತು ಕಾಲು ಬಾಯಿ ರೋಗ ಮುಕ್ತ ಜಿಲ್ಲೆ ಹಾಗೂ ರಾಜ್ಯವನ್ನಾಗಿ ಮಾಡಲು ಇದೊಂದು ಉತ್ತಮ ಮಾರ್ಗ ಎಂದರಿ.

೨೦ನೇ ಜಾನುವಾರು ಗಣತಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು ೪,೫೭,೧೬೩ ಜಾನುವಾರುಗಳಿದ್ದು, ಸದ್ಯ ೪,೭೪,೦೫೦ ಡೋಜ್ ಲಸಿಕೆ ಲಭ್ಯವಿರುತ್ತದೆ. ಜಿಲ್ಲೆಯಲ್ಲಿ ಒಟ್ಟು ೩,೮೮೧ ಬ್ಲಾಕ್‌ಗಳನ್ನು ಮಾಡಲಾಗಿದೆ. ಇಲಾಖೆಯ ಹಾಗೂ ಬೇರೆ ಇಲಾಖೆ ಸೇರಿ ಒಟ್ಟು ೪೮೧ ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ. ಲಸಿಕೆದಾರರು ಮನೆ ಬಾಗಿಲಿಗೆ ಭೇಟಿ ನೀಡಿ, ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ. ರೈತ-ಬಾಂಧವರು ಲಸಿಕಾ ಸಿಬ್ಬಂದಿಗಳಿಗೆ ಸಹಕರಿಸಿ, ತಪ್ಪದೇ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಾಲುಬಾಯಿ ರೋಗದ ಲಸಿಕಾ ಕಾರ್ಯಕ್ರಮದ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಲಾಯಿತು. ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಲಕ್ಷ÷್ಮಣ ಕಳ್ಳೆನ್ನವರ, ಕೆ.ಎಂ.ಎಫ್‌ನ ಉಪ ವ್ಯವಸ್ಥಾಪಕ ಸಿದ್ದು ಜಾಡರ ಸೇರಿದಂತೆ ಜಿಲ್ಲಾ ನಿರ್ವಹಣಾ ಸಮಿತಿ ಸದಸ್ಯ ಅಽಕಾರಿಗಳು ಹಾಗೂ ಆಯಾ ತಾಲೂಕಿನ ಮುಖ್ಯ ಪಶು ವೈದ್ಯಾಽಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net