ಏಕ ಸದಸ್ಯ ಆಯೋಗ ರಚನೆ ಒಪ್ಪಲ್ಲ

bkt-29-6
ಬಾಗಲಕೋಟೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿಯ ಸಂಚಾಲಕ ಶಿವಾನಂದ ಟವಳಿ ಮಾತನಾಡಿದರು. ಮುಖಂಡರಾದ ಮುತ್ತಣ್ಣ ಬೆಣ್ಣೂರ, ಸತೀಶ ಮಾದರ, ಹಣಮಂತ ಮುತ್ತತ್ತಿ, ಸಿದ್ದು ಮದರ, ಪ್ರಕಾಶ ಪೂಜಾರಿ ಇದ್ದರು.
Published on

ಬಾಗಲಕೋಟೆ: ಸುಪ್ರೀಂಕೋರ್ಟ ತೀರ್ಪಿನ ಅನ್ವಯ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸಬೇಕಿತ್ತು. ಆದರೇ ಸಿಎಂ ಸಿದ್ದರಾಮಯ್ಯ ಗೋಸುಂಬೆ ರೀತಿ ವರ್ತಿಸುತ್ತಿದ್ದಾರೆ. ಇದೀಗ ಏಕ ಸದಸ್ಯ ಆಯೋಗ ರಚನೆ ಮಾಡುವ ಮೂಲಕ ಕಾಲ ಹರಣ ಮಾಡಲು ಮುಂದಾಗಿದ್ದಾರೆ ಎಂದು ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿಯ ಸಂಚಾಲಕ ಶಿವಾನಂದ ಟವಳಿ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿ ಮಾಡಲು ಸುಪ್ರೀಂ ಕೋರ್ಟ್ ಆದೇಶ ನೀಡಿಯಾಗಿದೆ. ಮೀಸಲಾತಿ ವಂಚಿತರ ಕಣ್ಣೀರು ಒರೆಸುವ ಬದಲು ಕರ್ನಾಟಕ ಸರ್ಕಾರ ಕಣ್ಣಿಗೆ ಮಣ್ಣೆರುಚುವ ಹೊಸ ಆಯೋಗ ಮಾಡಲು ಹೊರಟಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಹೊಸ ಆಯೋಗ ರಚಿಸಿ ಮಾದಿಗ ಸಮುದಾಯದ ಯೊವಬ್ಬರು ಸರ್ಕಾರಕ್ಕೆ ಕೇಳಿಲ್ಲ ಸಂತ್ರಸ್ತ ದಲಿತರನ್ನು ವಂಚಿಸುವ ಉದ್ದೇಶದಿಂದಲೇ ಹೊಸ ನಾಟಕ ಶುರು ಮಾಡಿದ್ದಾರೆ ಎಂದು ಹರಿಹಾಯ್ದರು.

ರಾಜ್ಯದ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಮಾದಿಗರು ಎಲ್ಲಿ ಕಾಂಗ್ರೆಸ್ ವಿರುದ್ಧ ಮತ ಚಲಾಯಿಸುತ್ತಾರೆ ಎಂಬ ಭಯದಿಂದ ಸಿಎಂ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಆಯೋಗ ರಚಿಸಿದ್ದಾರೆ. ಇದನ್ನೆ ಕೇಳಲು ನಾವೇನು ಕಿವಿಯಲ್ಲಿ ಹೂವು ಇಟ್ಟುಕೊಂಡಿಲ್ಲ. ಬಿಜೆಪಿ ಸರ್ಕಾರ ಸದಾಶಿವ ಆಯೋಗ ವರದಿ ತೀರಸ್ಕಾರ ಮಾಡಿದೆ ಹೇಳಿಕೆ ಸುಳ್ಳು ಬಿಜೆಪಿ ಸರ್ಕಾರ ಇದ್ದಾಗ ವರದಿಯನ್ನು ತೆರೆದೇ ನೋಡಿಲ್ಲ. ಮುಖ್ಯಮಂತ್ರಿ ಆಯೋಗ ರಚಿಸಿರುವುದನ್ನು ವಿರೋಽಸಿ ಅ.೩೦ ರಂದು ಜಿಲ್ಲಾಽಕಾರಿಗಳ ಕಚೇರಿ ಎದುರು ಬೆಳಗ್ಗೆ ೧೦ ಗಂಟೆಗೆ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ರಾಜ್ಯ ಸಂಚಾಲಕ ಮುತ್ತಣ್ಣ ಬೆಣ್ಣೂರ ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯನವರ ರಾಜಕೀಯ ಕೊನೆಯ ಅಂಚಿನಲ್ಲಿದೆ. ಅಹಿಂದ ನಾಯಕ ಎಂದು ಬಿಂಬಿಸಿಕೊಳ್ಳುವ ಸಿದ್ಧರಾಮಯ್ಯ ಮಾದಿಗರಿಗೆ ದೊಡ್ಡ ಡಿಚ್ಚಿಯನ್ನು ಕೊಟ್ಟಿದ್ದಾರೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಏಕಸದಸ್ಯ ಆಯೋಗ ರಚನೆಗೆ ಮತ್ತೊಂದು ಆಯೋಗ ರಚಿಸಿರುವ ಸರ್ಕಾರದ ನಿರ್ಧಾರವನ್ನು ಒಪ್ಪುವುದಿಲ್ಲ. ಡಾ.ಮಹಾದೇವಪ್ಪ, ಪ್ರಿಯಾಂಕ ಖರ್ಗೆ ಅವರ ತಾಳಕ್ಕೆ ಕುಣಿಯುವ ಮುಖ್ಯಮಂತ್ರಿ ಮಾದಿಗ ಸಮಾಜಕ್ಕೆ ಮತ್ತೆ ಮೋಸ ಮಾಡಿದ್ದಾರೆ. ಬರುವ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಿ ತಕ್ಕ ಪಾಠ ಕಲಿಸಲಾಗುವುದು ಎಂದು ತಿಳಿಸಿದರು.

ಮಾದಿಗ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಕಾಂತಿಚಂದ್ರ ಜ್ಯೋತಿ ಮಾತನಾಡಿ, ದಲಿತ, ಹಿಂದುಳಿದವರನ್ನು ಇಟ್ಟುಕೊಂಡು ರಾಜಕೀಯವಾಗಿ ಭದ್ರವಾಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಸುಪ್ರೀಂ ಕೋರ್ಟ್ ಆದೇಶ ಮಾಡಿರುವುದನ್ನು ಹಾಗೂ ಈಗಾಗಲೇ ಆಯೋಗ ನೀಡಿರುವ ವರದಿಯನ್ನು ಆಧರಿಸಿ ಒಳಮೀಸಲಾತಿ ಜಾರಿ ಮಾಡದೇ ಈಗ ಮತ್ತೊಂದು ಆಯೋಗ ರಚಿಸಿರುವುದು ರಾಜಕೀಯ ಗಿಮಿಕ್ ಎಂದು ವ್ಯಂಗ್ಯವಾಡಿದರು.

ಮುಖಂಡರಾದ ಸತೀಶ ಮಾದರ, ಹಣಮಂತ ಮುತ್ತತ್ತಿ, ಸಿದ್ದು ಮಾದರ, ಪ್ರಕಾಶ ಪೂಜಾರಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net