ಏಕೀಕರಣ ಹೋರಾಟ ಸ್ಮರಣೀಯ

01 Ark 01
Published on

ಅರಕೇರಾ: ಕನ್ನಡ ಭಾಷೆ ಶಾಸ್ತ್ರೀಯ ಸ್ಥಾನಮಾನ ಹೊಂದಿದ್ದು, ಅನ್ಯ ಭಾಷೆಗಳಿಗೆ ಹೋಲಿಸಿದರೆ ಅತ್ಯಂತ ಶ್ರೀಮಂತವಾಗಿದೆ ಎಂದು ತಹಸೀಲ್ದಾರ್ ಅಮರೇಶ ಬಿರಾದರ್ ಹೇಳಿದರು.

ಪಟ್ಟಣದ ತಹಸಿಲ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಶುಕ್ರವಾರ ಮಾತನಾಡಿದರು. ದೇಶದ ಪ್ರತಿ ನೋಟಿನಲ್ಲಿ ನಾಲ್ಕನೇ ಸಾಲಿನಲ್ಲಿ ಕನ್ನಡ ಇರುವುದು ವಿಶೇಷ. ಐವತ್ತರ ನೋಟಿನಲ್ಲಿ ಕರ್ನಾಟಕದ ಹಂಪಿಯ ಕಲ್ಲಿನ ರಥ ಇರುವುದು ಗಮನಾರ್ಹ. ಕರ್ನಾಟಕದ ಏಕೀಕರಣಕ್ಕಾಗಿ ನಡೆದ ಹೋರಾಟವನ್ನು ಸ್ಮರಿಸಬೇಕು. ಕನ್ನಡ ನಾಡು, ನುಡಿ, ನೆಲ, ಜಲದಿಂದ ಸಮೃದ್ಧವಾಗಿದೆ ಎಂದರು.

ತಾಲೂಕಿನಾದ್ಯಂತ ವಿವಿಧ ಕನ್ನಡ ಪರ ಸಂಘಟನೆಗಳು, ಗ್ರಾಪಂ ಹಾಗೂ ವಿವಿಧ ಸರ್ಕಾರಿ ಕಚೇರಿ, ಶಾಲೆ, ಕಾಲೇಜು, ಸಂಘ, ಸಂಸ್ಥೆಗಳಲ್ಲಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ರಾಜ್ಯೋತ್ಸವ ಆಚರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net